ಬೆಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ಹೆಚ್ಚಳವಾಗುತ್ತಿದ್ದು, ನೆನ್ನೆ ಮೈಸೂರಿನಲ್ಲಿ ಮತ್ತೊಂದು ಓಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಓಮಿಕ್ರಾನ್ ಹಾಗೂ ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊರೋನಾ ಮೂರನೆ ಅಲೆ ಭೀತಿ ಶುರುವಾಗಿದೆ. ನೆನ್ನೆ ಮೈಸೂರಿನಲ್ಲಿ ಮತ್ತೊಂದು ಓಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಮೈಸೂರು ವಿವಿಯ ವಿದೇಶಿ ವಿದ್ಯಾರ್ಥಿನಿಗೆ ಓಮಿಕ್ರಾನ್ ದೃಢಪಟ್ಟಿದೆ. ಡಿಸೆಂಬರ್ 20ರಂದು ತಾಂಜೇನಿಯಾ ದೇಶದಿಂದ ಬಂದಿದ್ದ ವಿದ್ಯಾರ್ಥಿನಿಗೆ ಸೋಂಕು ತಗುಲಿದ್ದು, ಸೋಂಕಿತೆಯ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ.