ದುಬೈ: ಏಷ್ಯಾ ಕಪ್ 2022ರ ಸೂಪರ್ ಫೋರ್ ಹಂತದ ಟೀಂ ಇಂಡಿಯಾ ಮತ್ತು ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಏಷ್ಯಾ ಕಪ್ ನ ಲೀಗ್ ಹಂತದ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ರೋಚಕ ಜಯ ಗಳಿಸಿರುವ ಟೀಂ ಇಂಡಿಯಾ ಪಾಕ್ ವಿರುದ್ಧ ಮತ್ತೊಂದು ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ. ಆದರೆ ಹಾಂಗ್ ಕಾಂಗ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ ಗಳ ನಿರಾಶಾದಾಯಕ ಪ್ರದರ್ಶನ ತಂಡದ ಮೇಲಿನ ಒತ್ತಡವನ್ನು ಹೆಚ್ಚಿಸಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗದಲ್ಲೂ ಉತ್ತಮ ಆಟವಾಡಬೇಕಾದ ಒತ್ತಡದಲ್ಲಿದೆ.
ಟೀಂ ಇಂಡಿಯಾಗೆ ಹಾರ್ದಿಕ್ ಪಾಂಡ್ಯ ವಾಪಸ್ಸಾಗಿದ್ದರೆ, ದೀಪಕ್ ಹೂಡ ಮತ್ತು ರವಿ ಬಿಶ್ನೋಯಿ 11 ರ ಬಳಗದಲ್ಲಿ ಸ್ಥಾನ ಪಡೆದಿದ್ಧಾರೆ.
Pakistan have won the toss and elect to bowl first.
Live – https://t.co/xhki2AW6ro #INDvPAK #AsiaCup202 pic.twitter.com/mxxy1wDwKp
— BCCI (@BCCI) September 4, 2022
ಇನ್ನು ಪಾಕಿಸ್ತಾನ ತಂಡ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಸೋತಿದ್ದರೂ ಸಹ ಹಾಂಗ್ ಕಾಂಗ್ ವಿರುದ್ಧ ಭಾರಿ ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ. ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಗೆಲುವು ಸಾಧಿಸಲು ಪ್ರಯತ್ನಿಸಲಿದೆ.
ತಂಡಗಳು:
ಟೀಂ ಇಂಡಿಯಾ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿ.ಕೀ.), ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಯಜುವೇಂದ್ರ ಚಾಹಲ್, ಅರ್ಷದೀಪ್ ಸಿಂಗ್
ಪಾಕಿಸ್ತಾನ: ಮೊಹಮ್ಮದ್ ರಿಜ್ವಾನ್ (ವಿ.ಕೀ.), ಬಾಬರ್ ಅಜಮ್(ನಾಯಕ), ಫಖರ್ ಜಮಾನ್, ಖುಷ್ದಿಲ್ ಶಾ, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಹಾರಿಸ್ ರೌಫ್, ಮೊಹಮ್ಮದ್ ಹಸ್ನೇನ್, ನಸೀಮ್ ಶಾ
Three changes for #TeamIndia going into this game.
Deepak Hooda, Hardik Pandya and Ravi Bishnoi come in the Playing XI.
Live – https://t.co/xhki2AW6ro #INDvPAK #AsiaCup202 pic.twitter.com/ZeimY92kpW
— BCCI (@BCCI) September 4, 2022