ಬೆಂಗಳೂರು: ಬಿಜೆಪಿಯಿಂದ ಕಾಂಗ್ರೆಸ್ ಗೆ ಹೋಗುತ್ತಾರೆ ಅನ್ನುವ ವಿಚಾರದ ಬಗ್ಗೆ ಅಬಕಾರಿ ಸಚಿವ ಕೆ. ಗೋಪಾಲಯ್ಯ ಪ್ರತಿಕ್ರಿಯಿಸಿದ್ದು, ಬಿಜೆಪಿ ಬಿಟ್ಟು ಹೋಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಸಚಿವ ಕೆ. ಗೋಪಾಲಯ್ಯ ಬಿಜೆಪಿ ಬಿಟ್ಟು ಹೋಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಪಕ್ಷ ನಮಗೆ ಎಲ್ಲವನ್ನೂ ಕೊಟ್ಟಿದ್ದು, ಶಾಸಕ, ಸಚಿವ ಸ್ಥಾನ ಎಲ್ಲವನ್ನೂ ಕೊಟ್ಟಿದೆ. ಹೀಗಿರುವಾಗ ನಾವು ಯಾಕೆ ಬಿಜೆಪಿ ಬಿಡಬೇಕು.. ಸಿಎಂ ಬಸವರಾಜ್ ಬೊಮ್ಮಾಯಿ ನಾಯಕತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ, ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ. ನಾವು 17 ಮಂದಿ ಒಗ್ಗಟ್ಟಾಗಿಯೇ ಇದ್ದೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : #Flashnews ಕಾಂಗ್ರೆಸ್ಗೆ ಬಿಗ್ ಶಾಕ್….! ನಮಗೂ ಕಾಂಗ್ರೆಸ್ಗೂ ಮುಗಿದ ಅಧ್ಯಾಯ : MLC ಸಿಎಂ ಇಬ್ರಾಹಿಂ ಹೇಳಿಕೆ…!