ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ರಿಲೀಸ್ಗೆ ರೆಡಿಯಾಗಿದ್ದು, ಜನವರಿ 25 ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆಯಿದೆ.
ಶಾರುಖ್ ಖಾನ್ ಅವರು ನಾಲ್ಕು ವರ್ಷಗಳ ಬಳಿಕ ದೊಡ್ಡ ಪರದೆಗೆ ಮರಳುತ್ತಿರುವುದರಿಂದ ಸಹಜವಾಗಿಯೇ ಅವರ ಅಭಿಮಾನಿಗಳ ವಲಯದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಈಗ ‘ಪಠಾಣ್’ ಚಿತ್ರ ಅಡ್ವಾನ್ಸ್ ಬುಕಿಂಗ್ನಲ್ಲಿ ಕೆಜಿಎಫ್ 2 ಸಿನಿಮಾ ದಾಖಲೆಯನ್ನು ಮುರಿಯಲಿದೆ ಎನ್ನಲಾಗುತ್ತಿದೆ.
ಶಾರುಖ್ ಖಾನ್ ನಟನೆಯ ‘ಪಠಾಣ್’ ಚಿತ್ರಕ್ಕೆ ಅಡ್ವಾನ್ಸ್ ಬುಕಿಂಗ್ ಶುರುವಾಗಿದೆ. ಶಾರುಖ್ ಖಾನ್ ಅವರು ಈ ಚಿತ್ರದಿಂದ ದೊಡ್ಡ ಗೆಲುವು ಕಾಣುವ ನಿರೀಕ್ಷೆಯಲ್ಲಿದ್ದಾರೆ. ಇದಕ್ಕೆ ಅಡ್ವಾನ್ಸ್ ಬುಕಿಂಗ್ ಸಾಕ್ಷಿ. ಇಲ್ಲಿಯವರೆಗೆ ಬರೋಬ್ಬರಿ 4.10 ಲಕ್ಷ ಟಿಕೆಟ್ಗಳು ಮಲ್ಟಿಪ್ಲೆಕ್ಸ್ನಲ್ಲಿ ಮಾರಾಟ ಆಗಿವೆ. ಇಂದು ರಾತ್ರಿ ವೇಳೆಗೆ ಈ ಸಂಖ್ಯೆ 5.25 ಲಕ್ಷ ದಾಟುವ ಸೂಚನೆ ಇದೆ. ‘ಕೆಜಿಎಫ್ 2’ ಸಿನಿಮಾದ ಹಿಂದಿ ವರ್ಷನ್ನ ಅಡ್ವಾನ್ಸ್ ಬುಕಿಂಗ್ನಲ್ಲಿ 5.15 ಲಕ್ಷ ಟಿಕೆಟ್ಗಳು ಮಾರಾಟ ಆಗಿದ್ದವು. ಈ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕ ಕಾರಣ ಮೊದಲ ದಿನ ಒಳ್ಳೆಯ ಕಲೆಕ್ಷನ್ ಮಾಡಿತು. ಈಗ ಅಡ್ವಾನ್ಸ್ ಬುಕಿಂಗ್ನಲ್ಲಿ ‘ಕೆಜಿಎಫ್ 2’ ದಾಖಲೆಯನ್ನು ಮುರಿಯಲು ಶಾರುಖ್ ಖಾನ್ ಸಿನಿಮಾ ರೆಡಿ ಆಗಿದೆ. ‘ಬಾಹುಬಲಿ 2’ ಚಿತ್ರ ಈ ಸಾಲಿನಲ್ಲಿ ಮೊದಲ ಸ್ಥಾನದಲ್ಲಿದೆ. ಈ ಚಿತ್ರದ ಹಿಂದಿ ವರ್ಷನ್ನಲ್ಲಿ 6.50 ಲಕ್ಷ ಟಿಕೆಟ್ಗಳು ಮಾರಾಟ ಆಗಿದ್ದವು.
ಇದನ್ನೂ ಓದಿ : ಇಂದು ರಾಜ್ಯಾದ್ಯಂತ ಸಾರಿಗೆ ನೌಕರರ ಪ್ರೊಟೆಸ್ಟ್… ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ…