ಕಲಬುರಗಿ: ಕಲಬುರಗಿ ನಗರದಲ್ಲಿ ಬೆಳ್ಳಂಬೆಳಗ್ಗೆ ರೌಡಿಗಳ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. DCP ಶ್ರೀನಿವಾಸುಲು ನೇತೃತ್ವದಲ್ಲಿ ರೌಡಿ ನಿಗ್ರಹ ದಳದ ಅಧಿಕಾರಿಗಳು 50ಕ್ಕೂ ಹೆಚ್ಚು ರೌಡಿಗಳನ್ನ ಕರೆತಂದು ಪರೇಡ್ ಮಾಡಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಕೇಂದ್ರ ಬಸ್ ನಿಲ್ದಾಣದಲ್ಲಿ ಅಭಿಷೇಕ್ ಎಂಬಾತನ ಮರ್ಡರ್ ಆಗಿದ್ದು, ಈ ಹಿನ್ನೆಲೆ ಎಚ್ಚೆತ್ತ ಪೊಲೀಸರು ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಸಮಾಜಘಾತುಕ ಕೃತ್ಯದಲ್ಲಿ ಭಾಗಿಯಾದ್ರೆ ಕಠಿಣ ಕ್ರಮ ಕೈಗೊಳ್ಳೋದಾಗಿ ಡಿಸಿಪಿ ಶ್ರೀನಿವಾಸಲು ವಾರ್ನಿಂಗ್ ಕೊಟ್ಟಿದ್ದಾರೆ.
ಇದನ್ನೂ ಓದಿ:ಟಿ20 ವಿಶ್ವಕಪ್… ಅಲ್ಪಮೊತ್ತಕ್ಕೆ ಕುಸಿದ ಸ್ಕಾಟ್ಲೆಂಡ್… ಟೀಂ ಇಂಡಿಯಾಗೆ 86 ರನ್ ಗುರಿ…