ಮಂಡ್ಯ : ಸಕ್ಕರೆನಾಡು ಮಂಡ್ಯದಲ್ಲಿ ರಾಜಕೀಯ ಅಖಾಡ ರಂಗೇರಿದೆ. ಆರ್. ಅಶೋಕ್ ಮಂಡ್ಯ ಜಿಲ್ಲಾ ಉಸ್ತುವಾರಿಯಾಗುತ್ತಿದ್ದಂತೆ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ರಣೋತ್ಸಾಹ ಆರಂಭವಾಗಿದೆ.
ಸಚಿವ ಆರ್ ಅಶೋಕ್ ಜಿಲ್ಲಾ ಉಸ್ತುವಾರಿಯಾಗುತ್ತಿದ್ದಂತೆ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಶ್ರೀರಂಗಪಟ್ಟಣದಲ್ಲಿ ರಂಗನಾಥ ದೇಗುಲಕ್ಕೆ ಸಚಿವ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ಸಲ್ಲಿಕೆ ಬಳಿಕ ಶ್ರೀರಂಗಪಟ್ಟಣದಲ್ಲಿ ಕಾರ್ಯಕರ್ತರ ಬೈಕ್ ರ್ಯಾಲಿಗೆ ಚಾಲನೆಯಾಗಿದೆ. ಬೈಕ್ ರ್ಯಾಲಿಯಲ್ಲಿ ಶ್ರೀರಂಗಪಟ್ಟಣಣದಲ್ಲಿ ಮೆರವಣಿಗೆ ಮಾಡಿದ್ದಾರೆ. ಪಟ್ಟಣದಲ್ಲಿ ಸಚಿವರು ಬಿಜೆಪಿ ಪಕ್ಷದ ಕಚೇರಿ ಉಧ್ಘಾಟನೆ ಮಾಡಿದ್ದಾರೆ. ಬೈಕ್ ಜಾಥಾ ಮೆರವಣಿಗೆಯಲ್ಲಿ ಪಕ್ಷದ ಮುಖಂಡ ಇಂಡುವಾಳು ಸಚ್ಚಿದಾನಂದ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ಇದನ್ನೂ ಓದಿ : ನಾನು ವೋಟ್ಗೆ ಇಷ್ಟು ಹಣ ಕೊಡ್ತೀನಿ ಅಂದಿಲ್ಲ.. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ : ರಮೇಶ್ ಜಾರಕಿಹೊಳಿ ಸ್ಪಷ್ಟನೆ …