ಕೋಲಾರ: ನ.13ರಂದು ಕೋಲಾರಕ್ಕೆ ಸಿದ್ದರಾಮಯ್ಯ ಆಗಮನ ಹಿನ್ನೆಲೆ, ನಗರದ ಹೊರವಲಯದ ನಂದಿನಿ ಪ್ಯಾಲೇಸ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆ ನಡೆಸಿದ್ದಾರೆ.
ಮಾಜಿ ಸ್ಪೀಕರ್ ಕೆಆರ್ ರಮೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆದಿದ್ದು, ಸಭೆಯಲ್ಲಿ ಮಾಲೂರು ಶಾಸಕ ಕೆ.ವೈ ನಂಜೇಗೌಡ, ಚಿಂತಾಮಣಿ ಕ್ಷೇತ್ರದ ಮಾಜಿ ಶಾಸಕ ಸುಧಾಕರ್, ಕೋಲಾರ ಶಾಸಕ ಕೆ. ಶ್ರೀನಿವಾಸ್ ಗೌಡ, ಎಂಎಲ್ಸಿ ಅನಿಲ ಕುಮಾರ್, ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ, ಎಂಎಲ್ಸಿ ನಜೀರ್ ಅಹಮದ್, ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.
ಸಿದ್ದರಾಮಯ್ಯ ಕೋಲಾರ ಪ್ರವಾಸದ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡಬೇಕೆಂದು ಜಿಲ್ಲೆಯ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರು ಒತ್ತಾಯ ಹಿನ್ನೆಲೆ, ನ.13ರಂದು ಭಾನುವಾರ ಕೋಲಾರಕ್ಕೆ ಆಗಮಿಸುತ್ತಿರುವ ಸಿದ್ದರಾಮಯ್ಯ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಸಭೆಯಲ್ಲಿ ತಿರ್ಮಾನ ಕೈಗೊಳ್ಳಲಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸೇಫ್ ಕ್ಷೇತ್ರಕ್ಕಾಗಿ ಸಿದ್ದರಾಮಯ್ಯ ಹುಡುಕಾಟ ಹಿನ್ನೆಲೆ, ನ.13ರಂದು ಕೋಲಾರಕ್ಕೆ ಅಗಮಿಸುತ್ತಿರುವ ಸಿದ್ದರಾಮಯ್ಯ ಪ್ರವಾಸ ಮಹತ್ವ ಪಡೆದಿದೆ. ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡಿದ್ರೆ ಜಿಲ್ಲೆ ಅಭಿವೃದ್ಧಿಯಾಗುತ್ತೆ ಅವರು ಬಂದು ಚುನಾವಣೆಯಲ್ಲಿ ಸ್ಪರ್ಧಿಸಿದ್ರೆ ನಾವು ಗೆಲ್ಲಿಸಿಕೊಡುತ್ತೇವೆ ಸಭೆಯಲ್ಲಿ ಶಾಸಕರು ತಮ್ಮ ಅನಿಸಿಕೆ ಹಂಚಿಕೊಂಡರು.
ಇದನ್ನೂ ಓದಿ:ಮಡಿಕೇರಿಯಲ್ಲೊಬ್ಬ ವಿಕೃತಕಾಮಿ..! ಮೃತದೇಹಗಳ ಬೆತ್ತಲೆ ಫೋಟೊ ತೆಗೆದು ಸಂಭ್ರಮಿಸುವುದೇ ಈತನ ಕೆಲಸ ..!