ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಮುಂದಿನ ತಿಂಗಳು ಎರಡು ಬಾರಿ ಮತ್ತೆ ಕರುನಾಡಿಗೆ ಆಗಮಿಸಲಿದ್ದಾರೆ. ಫೆಬ್ರವರಿ 6 ಮತ್ತು 27 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ.
ಮೋದಿ ಬ್ಯಾಕ್ ಟು ಬ್ಯಾಕ್ ಎಂಟ್ರಿಗೆ ರಾಜ್ಯದಲ್ಲಿ ಬಿಜೆಪಿ ಫುಲ್ ಸ್ಟ್ರಾಂಗ್ ಆಗಿದೆ. ಕಲ್ಯಾಣ ಕರ್ನಾಟಕ ಟೂರ್ ಸಕ್ಸಸ್ ಬೆನ್ನಲ್ಲೇ ಇದೀಗ ಮತ್ತೆ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಫೆಬ್ರವರಿ 6 ರಂದು ದಾವಣಗೆರೆ ಹಾಗೂ ಚಿಕ್ಕಬಳ್ಳಾಪುರದ ಪೆರಸಂದ್ರ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಮೋದಿ ಎರಡು ಜಿಲ್ಲೆಗಳ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಿದ್ದು, ಫೆ.27 ಕ್ಕೆ ಶಿವಮೊಗ್ಗ ಹಾಗೂ ವಿಜಯಪುರದಲ್ಲಿ ಈ ವಿಮಾನ ನಿಲ್ದಾಣಗಳ ಉದ್ಘಾಟನೆ ಮಾಡಲಿದ್ದಾರೆ. ನಮೋ ಸಾವಿರಾರು ಕೋಟಿಗಳ ಯೋಜನೆಗೆ ಚುನಾವಣೆಯ ಹೊತ್ತಲ್ಲಿ ಚಾಲನೆ ನೀಡಲಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣ ಬಿ ಎಸ್ ವೈ ಬಹುದಿನಗಳ ಕನಸಾಗಿದೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ಸೆಕ್ಯೂರಿಟಿ ಮೇಲೆ ಡೆಲಿವರಿ ಬಾಯ್ ಹಲ್ಲೆ… ದಿನಸಿ ವಸ್ತುಗಳನ್ನ ಡೆಲಿವರಿ ಮಾಡಲು ಬಂದಿದ್ದ ಯುವಕ…