ಬೆಂಗಳೂರು: ಉಕ್ರೇನ್ ನಲ್ಲಿ ರಷ್ಯಾ (Russia) ಮತ್ತು ಉಕ್ರೇನ್ (Ukraine) ನಡುವಿನ ಯುದ್ಧದಲ್ಲಿ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ (Naveen Gyanagoudar) ಕುಟುಂಬಸ್ಥರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭೇಟಿ ಮಾಡಿದ್ಧಾರೆ.
ಇಂದು ಕೊಮ್ಮಘಟ್ಟದಲ್ಲಿ ನಡೆದ ಸಾರ್ವಜನಿಕ ಸಮಾವೇಶದ ಸ್ಥಳದಲ್ಲಿ ಮೋದಿ ಅವರು ನವೀನ್ ಕುಟುಂಬಸ್ಥರನ್ನು ಭೇಟಿ ಮಾಡಿದರು. ವೇದಿಕೆಯ ಹಿಂಭಾಗದಲ್ಲಿ ನವೀನ್ ಕುಟುಂಬವನ್ನು ಭೇಟಿ ಮಾಡಿ ಅವರೊಂದಿಗೆ 5 ನಿಮಿಷ ಮಾತುಕತೆ ನಡೆಸಿ ಅವರಿಗೆ ಸಮಾಧಾನ ಹೇಳಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜೊತೆಗಿದ್ದರು.