ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 2 ದಿನಗಳ ಪ್ರವಾಸಕ್ಕಾಗಿ ನಾಳೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಅವರ ಸ್ವಾಗತಕ್ಕಾಗಿ ನಗರದ ಹಲವೆಡೆ ಫ್ಲೆಕ್ಸ್ ಗಳನ್ನು ಅಳವಡಿಸಲಾಗಿದೆ.
ಮೈಸೂರು ರಸ್ತೆಯಲ್ಲಿ ಮೋದಿ ಅವರಿಗೆ ಹಿಂದಿಯಲ್ಲಿ ಸ್ವಾಗತ ಕೋರಿ ಫ್ಲೆಕ್ಸ್ ಅಳವಡಿಸಿದ್ದಕ್ಕೆ ರೊಚ್ಚಿಗೆದ್ದ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಫ್ಲೆಕ್ಸ್ ಗೆ ಮಸಿ ಬಳಿದಿದ್ದಾರೆ.