ಬೆಂಗಳೂರು : ಇಂದಿನಿಂದ ಸಾರಿಗೆ ನೌಕರರ ಪ್ರತಿಭಟನೆ ನಡೆಸಲಿದ್ದು, ನೌಕರರು ಫ್ರೀಡಂಪಾರ್ಕ್ನಲ್ಲಿ ಧರಣಿಗೆ ಕೂರಲಿದ್ದಾರೆ . ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದಾರೆ. ರಾಜ್ಯ ರಸ್ತೆ ಸಾರಿಗೆ ನೌಕರರ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಂಘಟನೆಗಳ ಮುಖಂಡರು, ಸ್ವಯಂಸೇವಕರಿಂದ ಧರಣಿ ನಡೆಸಲಾಗುತ್ತದೆ.
ಎಲ್ಲ ವಿಭಾಗೀಯ ಕಚೇರಿಗಳ ಎದುರು ಸಂಘಟನೆ, ಮೊದಲ ಹಂತದಲ್ಲಿ ಸಾಂಕೇತಿಕ ಧರಣಿ ನಡೆಸಲು ನಿರ್ಧಾರ ಮಾಡಿದ್ದಾರೆ. KSRTC ಸ್ಟಾಫ್ & ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಅನಂತಸುಬ್ಬರಾವ್ ಮಾಹಿತಿ ನೀಡಿದ್ದಾರೆ.
ಆರು ಕಾರ್ಮಿಕ ಸಂಘಟನೆಗಳು 14 ಬೇಡಿಕೆಗಳನ್ನು ಮುಂದಿಟ್ಟಿದೆ. ವೇತನ ಹೆಚ್ಚಳ ಒಪ್ಪಂದ 2020ರಂತೆ ವೇತನ ಪರಿಷ್ಕರಣೆ ಮಾಡಬೇಕು. ಮೂರು ವರ್ಷಗಳಿಂದ ಸರ್ಕಾರ ವೇತನ ಹೆಚ್ಚಳ ಮಾಡಿಲ್ಲ. ಕುಟುಂಬ ನಿರ್ವಹಣೆ ಸಾಧ್ಯವಾಗದೆ ನೌಕರರು ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಹಲವು ಬಾರಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರ ಗಮನಕ್ಕೆ ತರಲಾಗಿದೆ. ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಧರಣಿ ನಡೆಸಲು ಮುಂದಾಗಿದ್ದೇವೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ : 50 ಸಾವಿರ ಹಣ ವಾಪಸ್ ಕೊಡುವಂತೆ ಕಾರ್ಯಕರ್ತನಿಗೆ ಧಮ್ಕಿ ಹಾಕಿದ MLA ಶಿವಲಿಂಗೇಗೌಡರು..! MLA ಬೆದರಿಕೆ ಆಡಿಯೋ ಫುಲ್ ವೈರಲ್…