ಬೆಂಗಳೂರು : ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಎಡಿಜಿಪಿ ಅಮೃತ್ ಪೌಲ್ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಸಿಐಡಿ ಅಧಿಕಾರಿಗಳು 1406 ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದ್ದು, 78 ದಾಖಲೆಗಳು, 38 ಸಾಕ್ಷಿಗಳ ಉಲ್ಲೇಖಿಸಲಾಗಿದೆ. 1 ನೇ ಎಸಿಎಂಎಂ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಎಂದು ತನಿಖಾಧಿಕಾರಿ ಡಿವೈಎಸ್ಪಿ ಬಿ.ಕೆ.ಶೇಖರ್ ಅವರು ಹೇಳಿದ್ದಾರೆ.