ಬೆಂಗಳೂರು: ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್ ರಣಕಹಳೆ ಊದಿದ್ದು, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಬೆಲೆ ಏರಿಕೆ ಖಂಡಿಸಿ ರಾಷ್ಟ್ರಪತಿ ಭವನ ಚಲೋ ಹಮ್ಮಿಕೊಳ್ಳಲಾಗಿದ್ದು, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. ಲೋಕಸಭೆ, ರಾಜ್ಯಸಭೆ ಸಂಸದರಿಂದ ಪ್ರತಿಭಟನೆ ನಡೆಸಲಾಗಿದ್ದು,
ಪ್ರತಿಭಟನಾ ಕಾವು ಜೋರಾಗ್ತಿದ್ದಂತೆ ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆಯಲಾಗಿದೆ. ದೆಹಲಿ ಪೊಲೀಸರು ರಾಹುಲ್ ಗಾಂಧಿ ಜೊತೆ ಪ್ರಿಯಾಂಕಾ ಗಾಂಧಿ ವಾದ್ರಾರನ್ನೂ ವಶಕ್ಕೆ ಪಡೆದಿದ್ದಾರೆ. ದೆಹಲಿ AICC ಕಚೇರಿ ಬಳಿ ರಾಹುಲ್ ಗಾಂಧಿ ಸೇರಿ ಹಲವು ನಾಯಕರನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ನಕಲಿ ಛಾಪಾ ಕಾಗದ ಹಗರಣ ಬಯಲು…! ಸಿಸಿಬಿ ಪೊಲೀಸರಿಂದ 11 ಆರೋಪಿಗಳು ಅರೆಸ್ಟ್…