ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ಸಂಬಂಧ ಸರ್ಕಾರ ನೀಡುವ ಆದೇಶದಂತೆ ನಡೆದುಕೊಳ್ಳೋದಾಗಿ ನಗರ ಜಿಲ್ಲಾಧಿಕಾರಿ ದಯಾನಂದ್ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ,ಈಗಾಗಲೇ ಕಂದಾಯ ಸಚಿವರು ಕಳೆದ ಬಾರಿಯಂತೆಯೇ ಈ ಬಾರಿಯೂ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚಿಸಿದ್ದಾರೆ. ಸುಪ್ರೀಂಕೋರ್ಟ್ಆದೇಶದಲ್ಲಿ ಏನಿದೆ ಎನ್ನುವುದನ್ನು ನೋಡಿಕೊಂಡು ಸರ್ಕಾರದ ಕಾರ್ಯದರ್ಶಿ ಆದೇಶ ನೀಡುತ್ತಾರೆ. ಅದರಂತೆ ನಾವು ನಡೆದುಕೊಳ್ತೇವೆ. ಧ್ವಜಾರೋಹಣ ಸೇರಿದಂತೆ ಬೇರೆ ಏನೇನ್ ಕಾರ್ಯಕ್ರಮ ಆಯೋಜನೆ ಮಾಡಬೇಕು ಎಂದು ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ.