ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಅವರು ತಾಳ್ಮೆ ಕಳೆದುಕೊಳ್ಳುವುದು ಬೇಡ, ಪದೇ ಪದೇ ಪಕ್ಷದ ವಿರುದ್ಧ ಮಾತನಾಡುವುದು ತಪ್ಪು ಎಂದು ಶಾಸಕ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರು ತಮ್ಮ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ರಿಜ್ವಾನ್ ಅರ್ಷದ್ ಅವರು ವಿರೋಧ ಪಕ್ಷದ ನಾಯಕ ಸ್ಥಾನ ಸಿಗದಿದ್ದಕ್ಕೆ ಅವರ ಅಸಮಾಧಾನಗೊಂಡಿದ್ದಾರೆ. ಆದರೆ ಈಗ ಅಧಿಕಾರಕ್ಕಾಗಿ ಹೋರಾಟ ಮಾಡುವ ಸಮಯವಲ್ಲ. ಸೈದ್ಧಾಂತಿಕವಾಗಿ ಹೋರಾಟ ಮಾಡಬೇಕಿದೆ. ಇಬ್ರಾಹಿಂ ನಡೆಯಿಂದ ಪಕ್ಷ ಮತ್ತು ಹೈಕಮಾಂಡ್ ಗೆ ತಪ್ಪು ಸಂದೇಶ ರವಾನೆಯಾಗುತ್ತದೆ. ಎಲ್ಲರೂ ಸೇರಿ ಬಿಜೆಪಿ ವಿರುದ್ಧ ಹೋರಾಡೋಣ ಎಂದು ತಿಳಿಸಿದ್ಧಾರೆ.
ಇದನ್ನೂ ಓದಿ: ಸಿಎಂ ಇಬ್ರಾಹಿಂ ಯಾವಾಗ ಏನ್ ಮಾತ್ನಾಡ್ತಾರೆ ಗೊತ್ತಿಲ್ಲ… ಇಬ್ರಾಹಿಂ ಡೇಂಜರ್ ಎಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಅಲ್ಪ ಸಂಖ್ಯಾ ನಾಯಕರು ಗೇಣೆದಾರರು ಎಂಬ ಇಬ್ರಾಹಿಂ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ರಿಜ್ವಾನ್ ಅವರು ನಾವು ಯುವಕರಾದರೂ ನಮಗೆ ಅವಕಾಶ ಕೊಟ್ಟಿದ್ದಾರೆ. ಕಾಂಗ್ರೆಸ್ ನಮ್ಮನ್ನು ಯಾವತ್ತೂ ಆ ರೀತಿ ನಡೆಸಿಕೊಂಡಿಲ್ಲ. ಮಾತಿನ ಮಲ್ಲ ಇಬ್ರಾಹಿಂ ಅವರು ನೋವಿನಲ್ಲಿದ್ದಾರೆ. ಈ ಸಂದರ್ಭದಲ್ಲಿ ಅವರ ಮಾತನ್ನು ಸೀರಿಯಸ್ ಆಗಿ ತೆಗೆದುಕೊಳ್ಳಬಾರದು. ನಾನು ಸಹ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ.
ಇನ್ನು ರಿಜ್ವಾನ್ ಅರ್ಷದ್ ಅವರನ್ನು ಭೇಟಿ ಮಾಡಿ ಹೊರಡುವಾಗ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು ಪಕ್ಷ ಬಿಡುತ್ತೇನೆ ಎಂದು ಅವರು ಹಿಂದೆಯೂ ಹೇಳಿದ್ದರು. ಈಗ ಮತ್ತೆ ಪಕ್ಷ ಬಿಡುವುದಾಗಿ ಹೇಳಿದ್ದಾರೆ. ನಾನು ಸಿಎಂ ಇಬ್ರಾಹಿಂ ಅವರ ಜೊತೆ ಮಾತನಾಡುತ್ತೇನೆ ಎಂದು ತಿಳಿಸಿದ್ಧಾರೆ.