ಮುಂಬೈ: ಮುಂಬೈನ ಬ್ರಬೋರ್ನ್ ಮೈದಾನದಲ್ಲಿ ನಡೆಯುತ್ತಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಕಳೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಭರ್ಜರಿ ಜಯ ದಾಖಲಿಸಿದ್ದ ಆರ್ ಸಿ ಬಿ ತಂಡ ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಪ್ಲೇ ಆಫ್ ಹಾದಿ ಸುಗಮ ಮಾಡಿಕೊಳ್ಳಲು ಪ್ರಯತ್ನಿಸಲಿದೆ. ಇದು ಆರ್ ಸಿ ಬಿಯ 13 ನೇ ಪಂದ್ಯವಾಗಿದ್ದು, ಮುಂದಿನ ಪಂದ್ಯದಲ್ಲಿ ಈಗಾಗಲೇ ಪ್ಲೇ ಆಫ್ ತಲುಪಿರುವ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಲಿದೆ.
Match 60. Royal Challengers Bangalore won the toss and elected to field. https://t.co/jJzEACCFR1 #RCBvPBKS #TATAIPL #IPL2022
— IndianPremierLeague (@IPL) May 13, 2022
ಇನ್ನು ಪ್ಲೇ ತಲುಪಿವ ಆಸೆಯನ್ನು ಜೀವಂತವಾಗಿರಿಸಿಕೊಳ್ಳಬೇಕಾದರೆ ಉಳಿದ ಮೂರೂ ಪಂದ್ಯಗಳನ್ನು ಗೆಲ್ಲಬೇಕಾದ ಒತ್ತಡದಲ್ಲಿ ಪಂಜಾಬ್ ಕಿಂಗ್ಸ್ ತಂಡವಿದೆ. ಪಾಯಿಂಟ್ ಟೇಬಲ್ ನಲ್ಲಿ 8 ನೇ ಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್ ತಂಡ ಆರ್ ಸಿ ಬಿ ವಿರುದ್ಧ ಗೆಲುವು ಸಾಧಿಸಲು ಸರ್ವಪ್ರಯತ್ನ ಮಾಡಲಿದೆ.
🚨 Toss Update 🚨@RCBTweets have elected to bowl against @PunjabKingsIPL.
Follow the match ▶️ https://t.co/jJzEACTIT1 #TATAIPL | #RCBvPBKS pic.twitter.com/xyx7pc62X3
— IndianPremierLeague (@IPL) May 13, 2022
ತಂಡಗಳು
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿ.ಕೀ.), ಮಹಿಪಾಲ್ ಲೊಮ್ರೋರ್, ಶಹಬಾಜ್ ಅಹ್ಮದ್, ವನಿಂದು ಹಸರಂಗಾ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್
ಪಂಜಾಬ್ ಕಿಂಗ್ಸ್: ಜಾನಿ ಬೈರ್‌ಸ್ಟೋವ್, ಶಿಖರ್ ಧವನ್, ಭಾನುಕಾ ರಾಜಪಕ್ಸೆ, ಮಯಾಂಕ್ ಅಗರ್ವಾಲ್ (ನಾಯಕ), ಜಿತೇಶ್ ಶರ್ಮಾ(ವಿ.ಕೀ.), ಲಿಯಾಮ್ ಲಿವಿಂಗ್‌ಸ್ಟೋನ್, ರಿಷಿ ಧವನ್, ಕಗಿಸೊ ರಬಾಡ, ರಾಹುಲ್ ಚಾಹರ್, ಹರ್‌ಪ್ರೀತ್ ಬ್ರಾರ್, ಅರ್ಶ್‌ದೀಪ್ ಸಿಂಗ್