ಬೆಂಗಳೂರು : ಚಲಿಸುತ್ತಿದ್ದ ಕ್ಯಾಂಟರ್ಗೆ ಹಿಂಬದಿಯಿಂದ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ.
ಅಸ್ಸಾಂ ಮೂಲದ ಕುಮಾರ್ ಲಿಂಬೂ ಮತ್ತು ಸುನಿಲ್ ಮೃತ ದುರ್ದೈವಿಗಳು. ತಡರಾತ್ರಿ 12 ಗಂಟೆ ಸುಮಾರಿಗೆ ಬಾಡಿಗೆ ಸ್ಕೂಟರ್ ಬುಕ್ ಮಾಡಿಕೊಂಡು ಇಬ್ಬರು ತೆರಳುತ್ತಿದ್ರು. ಈ ವೇಳೆ ಕ್ಯಾಂಟರ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ. ಸ್ಥಳದಲ್ಲೇ ಕುಮಾರ್ ಲಿಂಬು ಸಾವನ್ನಪ್ಪಿದ್ದು, ಸುನಿಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ರಾಜಾಜಿನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.