ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ನಾಳೆ 2 ದಿನಗಳ ಪ್ರವಾಸಕ್ಕಾಗಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ರಸ್ತೆಗಳನ್ನು ಬಂದ್ ಮಾಡಲಾಗಿದ್ದು, ಬದಲಿ ಮಾರ್ಗವನ್ನು ಪೊಲೀಸರು ಸೂಚಿಸಿದ್ದಾರೆ.
ನಾಳೆ ನರೇಂದ್ರ ಮೋದಿ ಅವರು ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರು ರಸ್ತೆ ಮತ್ತು ನೈಸ್ ಬ್ರಿಡ್ಸ್ ಕಡೆಯಿಂದ ಕೆಂಗೇರಿ, ಉತ್ತರಹಳ್ಳಿ ರಸ್ತೆಯಿಂದ ಕೆಂಗೇರಿ ಮತ್ತು ಮೈಸೂರು ಕಡೆಗೆ ಹೋಗುವ ರಸ್ತೆಗಳನ್ನು ಮಧ್ಯಾಹ್ನ 12.30 ರಿಂದ 3 ಗಂಟೆಯವರೆಗೆ ಬಂದ್ ಮಾಡಲಾಗಿದ್ದು, ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಇನ್ನು ನೈಸ್ ರಸ್ತೆ ಮೂಲಕ ಸೋಂಪುರ ಟೋಲ್, ಉತ್ತರಹಳ್ಳಿ ಮುಖ್ಯರಸ್ತೆ ಗೆ ಹಾಗೂ ಸೋಂಪುರ ಟೋಲ್ ಮೂಲಕ ಕೆಂಗೇರಿ ಮತ್ತು ಮೈಸೂರು ಕಡೆಗೆ ತೆರಳಲು ಅವಕಾಶ ಕಲ್ಪಿಸಲಾಗಿದೆ.
(2/2) pic.twitter.com/q2B5jVoIGU
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) June 19, 2022
ಇದನ್ನೂ ಓದಿ: ಟಾರೇ ಕಾಣದ ಬೆಂಗಳೂರು ರಸ್ತೆಗಳಿಗೆ ದಿಢೀರ್ ಟಾರ್ ಭಾಗ್ಯ… ಮೋದಿ ಸ್ವಾಗತಕ್ಕಾಗಿ ರಾತ್ರೋರಾತ್ರಿ ರಸ್ತೆಗಳಿಗೆ ಹೊಸ ಟಾರ್…
ಇನ್ನು ನಾಗರಬಾವಿ ಸರ್ಕಲ್ ನಿಂದ ಜ್ಞಾನಭಾರತಿ ಅಡ್ಮಿನ್ ಬ್ಲಾಕ್ ಜಂಕ್ಷನ್ ವರೆಗೆ, ಮೈಸೂರು ರಸ್ತೆ ಜ್ಞಾನಭಾರತಿ ಜಂಕ್ಷನ್ ನಿಂದ ಯೂನಿವರ್ಸಿಟಿ ಕಡೆಗೆ, ಹಳೆ ರಿಮಗ್ ರಸ್ತೆ ಉಲ್ಲಾಳ ಜಂಕ್ಷನ್ ನಿಂದ ಯೂನಿವರ್ಸಿಟಿ ಕಡೆಗೆ, ಕೆಂಗುಂಟೆ ಜಂಕ್ಷನ್, ನಮ್ಮೂರ ತಿಂಡಿ, ನಾಗರಬಾವಿ ರಿಂಗ್ ರಸ್ತೆ ಕಡೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಇನ್ನು ತುಮಕೂರು ರಸ್ತೆಯಿಂದ ನಗರದ ಒಳಭಾಗಕ್ಕೆ ಬರುವ ಎಲ್ಲಾ ರೀತಿಯ ಭಾರಿ ವಾಹನಗಳನ್ನು ನಿಷೇಧಿಸಲಾಗಿದೆ.
ಕೊಮ್ಮಘಟ್ಟ ಮುಖ್ಯ ರಸ್ತೆ, ಶಂಕರ್ ನಾಗ್ ಸರ್ಕಲ್ ನಿಂದ ರಾಬಿನ್ ಥಿಯೇಟರ್ ವರೆಗೆ, ನಾಗರಬಾವಿ ಸರ್ಕಲ್ ನಿಂದ ಜ್ಞಾನಭಾರತಿ ಅಡ್ಮಿನ್ ಜಂಕ್ಷನ್ ವರೆಗೆ, ಯೂನಿವರ್ಸಿಟಿ ಒಳಭಾಗದ ಮುಖ್ಯರಸ್ತೆ, ಲೇಡಿಸ್ ಹಾಸ್ಟಲ್ ರಸ್ತೆ, ಗಾಂಧಿ ಮಾರ್ಗ ರಸ್ತೆ, ಮೈಸೂರು ರಸ್ತೆ, ಜ್ಞಾನಭಾರತಿ ಜಂಕ್ಷನ್ ನಿಂದ ಜೈರಾಮ್ ದಾಸ್ ಜಂಕ್ಷನ್ ವರೆಗೆ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿದೆ.
ಇದನ್ನೂ ಓದಿ: ಕೊಮ್ಮಘಟ್ಟದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ..! ವಿವಿಧ ಯೋಜನೆಗಳಿಗೆ ಮೋದಿ ಚಾಲನೆ..!