ಬೀಜಿಂಗ್ : ಶಾಂಘೈನಲ್ಲಿ ಕೋವಿಡ್-19 ಕಾರಣದಿಂದಾಗಿ ಲಾಕ್‌ಡೌನ್ ಮಾಡಲಾಗಿದ್ದು, ಸ್ಥಳೀಯರು ಕಠಿಣ ಜೀವನ ನಡೆಸುತ್ತಿದ್ದಾರೆ. ನಗರದಲ್ಲಿ ಲಾಕ್‌ಡೌನ್ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಕಳೆದ ಕೆಲವು ದಿನಗಳಲ್ಲಿ ದೈನಂದಿನ ಸೋಂಕಿನ ಪ್ರಮಾಣವು ಕುಸಿದಿದ್ದರೂ, ಇತರ ದೇಶಗಳಿಗೆ ಹೋಲಿಸಿದರೆ ಇಲ್ಲಿ ಹೆಚ್ಚಾಗಿದೆ. ಹೀಗಾಗಿ ನಗರದ 26 ಮಿಲಿಯನ್ ನಿವಾಸಿಗಳನ್ನು ಮನೆಯಲ್ಲೇ ಇರುವಂತೆ ಸೂಚಿಸಲಾಗಿದೆ.
ಆರೋಗ್ಯ ಕಾರ್ಯಕರ್ತರು ಕೋವಿಡ್ ನಿಯಮಗಳ ಪಾಲನೆ ಬಗ್ಗೆ ಮೆಗಾಫೋನ್‌ಗಳ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಅನೌನ್ಸ್ ಮಾಡುತ್ತಿದ್ದಾರೆ. ಇಂದಿನಿಂದ ದಂಪತಿ ಪ್ರತ್ಯೇಕವಾಗಿ ಮಲಗಬೇಕು. ಪರಸ್ಪರರನ್ನು ಆಲಿಂಗನ ಮಾಡುವುದು, ಚುಂಬಿಸುವುದಕ್ಕೆ ಅವಕಾಶವಿಲ್ಲ. ಉಪಾಹಾರ, ಊಟ ಸೇವನೆಯೂ ಪ್ರತ್ಯೇಕವಾಗಿ ಆಗಬೇಕು. ನಿಮ್ಮ ಸಹಕಾರಕ್ಕೆ ಧನ್ಯವಾದಗಳು ಎಂದು ಅನೌನ್ಸ್ ಮಾಡುತ್ತಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕೊರೋನಾ ಹರಡುವುದನ್ನು ತಡೆಯಲು ನಗರವು ಕಠಿಣ ನಿರ್ಬಂಧಗಳನ್ನು ವಿಧಿಸಿದ ನಂತರ ಚೀನಾದ ಆರ್ಥಿಕ ಕೇಂದ್ರಗಳು ಸ್ತಬ್ಧವಾಗಿವೆ. ಆರೋಗ್ಯ ಕಾರ್ಯಕರ್ತರು, ಸ್ವಯಂಸೇವಕರು, ವಿತರಣಾ ಸಿಬ್ಬಂದಿ, ವಿಶೇಷ ಅನುಮತಿ ಹೊಂದಿರುವ ಜನರನ್ನು ಮಾತ್ರ ಬೀದಿಗಳಲ್ಲಿ ಓಡಾಡಲು ಅನುಮತಿ ನೀಡಲಾಗಿದೆ. ಲಾಕ್‌ಡೌನ್ ಸಂದರ್ಭದಲ್ಲಿ ಅಗತ್ಯ ವಸ್ತುಗಳು, ಅಕ್ಕಿ, ಮಾಂಸ ದಾಸ್ತಾನಿದೆ. ಲಾಕ್‌ಡೌನ್ ವಿಧಿಸಿರುವ ವಲಯಗಳಲ್ಲಿ ಡೆಲಿವರಿ ಸಿಬ್ಬಂದಿ ಮೂಲಕ ನಿವಾಸಿಗಳಿಗೆ ಅಗತ್ಯ ವಸ್ತುಗಳನ್ನು ಪೂರೈಸಲಾಗುತ್ತದೆ.
This is more funny. “From tonight, couple should sleep separately, don’t kiss, hug is not allowed, and eat separately. Thank you for your corporation! “ pic.twitter.com/ekDwLItm7x
— Wei Ren (@WR1111F)
ಇದನ್ನೂ ಓದಿ : ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ನೆಲೆಗೊಳ್ಳಬೇಕಿದೆ..! ಮತಾಂತರ ಬೇಡ, ಧರ್ಮ ಧರ್ಮಗಳ ನಡುವೆ ಕಚ್ಚಾಟ ಬೇಡ.. ಸುಭುದೇಂದ್ರ ತೀರ್ಥ ಸ್ವಾಮೀಜಿ..