ಬೆಂಗಳೂರು: ಜಾರಿ ನಿರ್ದೇಶನಾಲಯದ (Enforcement Directorate) ಅಧಿಕಾರಿಗಳು ಐದನೇ ದಿನವೂ ರಾಹುಲ್ ಗಾಂಧಿ (Rahul Gandhi) ಯ ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರು ದೆಹಲಿಗೆ ಹೊರಟಿದ್ದಾರೆ.
ರಾಹುಲ್ ಗಾಂಧಿ ವಿಚಾರಣೆ ವಿರೋಧಿಸಿ ನಾಳೆ ಕಾಂಗ್ರೆಸ್ ಪಕ್ಷ ದೆಹಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಸಿದ್ದರಾಮಯ್ಯ ಅವರು ದೆಹಲಿಗೆ ತೆರಳುತ್ತಿದ್ಧಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನಿನ್ನೆಯೇ ದೆಹಲಿಗೆ ತೆರಳಿದ್ದಾರೆ. ಇನ್ನು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ದೆಹಲಿಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದಾರೆ.