ಚುನಾವಣಾ ಪ್ರಚಾರದ ನಿಮಿತ್ತ ಬೆಳಗಾವಿಗೆ ತೆರಳಿರುವ ಡಿ.ಕೆ ಶಿವಕುಮಾರ್ಗೆ ಭಾರೀ ಪ್ರತಿಭಟನೆ ಎದುರಾಗಿದೆ. ಡಿ.ಕೆಶಿ ವಿರುದ್ಧ ಪ್ರತಿಭಟನೆ ನಡೆಸಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರು ಗೋ ಬ್ಯಾಕ್ ಡಿಕೆಶಿ ಎಂದು ಘೋಷಣೆಗಳನ್ನು ಕೂಗಿದ್ದಾರೆ. ಡಿ.ಕೆ ಶಿವಕುಮಾರ್ ವಾಹನದತ್ತ ಚಪ್ಪಲಿ ತೂರಿದ ರಮೇಶ್ ಜಾರಕಿಹೊಳಿ ಬೆಂಬಲಿಗರು ಡಿ.ಕೆ. ಶಿವಕುಮಾರ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಈ ಎಲ್ಲಾ ಘಟನೆಗಳ ಬಗ್ಗೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಈ ವಿಚಾರದ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಇದು ಬಿಜೆಪಿ ಪ್ರಾಯೋಜಿತ ಗೂಂಡಾಗಿರಿ ಎಂದಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಅಭಿಮಾನಿಗಳೆಂದು ಹೇಳಿಕೊಂಡವರು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಕಾರುಗಳ ಮೇಲೆ ಕಲ್ಲೆಸೆದು ಪುಂಡಾಟಿಕೆ ನಡೆಸಿರುವುದು ಖಂಡನೀಯ, ಇದು ಬಿಜೆಪಿ ಪ್ರಾಯೋಜಿತ ಗೂಂಡಾಗಿರಿ ರಾಜ್ಯದ ಜನ ಗಮನಿಸುತ್ತಿದ್ದಾರೆ ಎಚ್ಚರವಿರಲಿ ಎಂದಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಅಭಿಮಾನಿಗಳೆಂದು ಹೇಳಿಕೊಂಡವರು @KPCCPresident @DKShivakumar ಕಾರುಗಳ ಮೇಲೆ ಕಲ್ಲೆಸೆದು ಪುಂಡಾಟಿಕೆ ನಡೆಸಿರುವುದು ಖಂಡನೀಯ.
ಇದು @BJP4Karnataka ಪ್ರಾಯೋಜಿತ ಗೂಂಡಾಗಿರಿ.
ರಾಜ್ಯದ ಜನ ಗಮನಿಸುತ್ತಿದ್ದಾರೆ,
ಎಚ್ಚರ ಇರಲಿ.#BJPGoondagiri
1/2— Siddaramaiah (@siddaramaiah) March 28, 2021
ಬಿಜೆಪಿ ಆಳ್ವಿಕೆಯಲ್ಲಿ ವಿರೋಧ ಪಕ್ಷದ ರಾಜ್ಯಾಧ್ಯಕ್ಷರಿಗೆ ರಕ್ಷಣೆ ಇಲ್ಲ ಎಂದಾದರೆ, ಸಾಮಾನ್ಯ ಜನರ ಪಾಡೇನು? ರಾಜ್ಯ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದು ಸಿಡಿ ಹಗರಣದ ಯುವತಿಯ ಹೇಳಿಕೆಯನ್ನು ಸಮರ್ಥಿಸುವಂತಿದೆ ಬೆಳಗಾವಿ ಪೊಲೀಸರ ‘ಮೂಕನಾಟಕ’. ಎಂದು ಟ್ವೀಟ್ ಮಾಡಿ ಸಿ.ಎಂ ಬಿಎಸ್ವೈ, ಗೃಹಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಟ್ಯಾಗ್ ಮಾಡಿದ್ದಾರೆ.
@BJP4Karnataka ಆಳ್ವಿಕೆಯಲ್ಲಿ ವಿರೋಧ ಪಕ್ಷದ ರಾಜ್ಯಾಧ್ಯಕ್ಷರಿಗೆ ರಕ್ಷಣೆ ಇಲ್ಲ ಎಂದಾದರೆ, ಸಾಮಾನ್ಯ ಜನರ ಪಾಡೇನು?
ರಾಜ್ಯ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದು ಸಿಡಿ ಹಗರಣದ ಯುವತಿಯ ಹೇಳಿಕೆಯನ್ನು ಸಮರ್ಥಿಸುವಂತಿದೆ ಬೆಳಗಾವಿ ಪೊಲೀಸರ ‘ಮೂಕನಾಟಕ’.@CMofKarnataka @BSBommai#BJPGoondagiri
2/2— Siddaramaiah (@siddaramaiah) March 28, 2021