ಬೆಂಗಳೂರು: ಕಾಂಗ್ರೆಸ್ ನ ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂದ ಅಸಮಧಾನ ಹೊರಹಾಕಿ ಕಾಂಗ್ರೆಸ್ ಪಕ್ಷ ತೊರೆಯುವುದಾಗಿ ತಿಳಿಸಿದ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಗರಿಗೆದರಿವೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಶಾಸಕ ರಿಜ್ವಾನ್ ಅರ್ಷದ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯನವ್ರೇ ಈ ಬಾರಿ ಕ್ಷೇತ್ರಾಂತರವೋ? ಪಕ್ಷಾಂತರವೋ?… ಟ್ವೀಟ್ ಮಾಡಿ ಕುಟುಕಿದ ಬಿಜೆಪಿ…
ಇಂದು ಮಧ್ಯಾಹ್ನ ಸಿದ್ದರಾಮಯ್ಯ ಅವರು ಫ್ರೇಜರ್ ಟೌನ್ ನಲ್ಲಿರುವ ರಿಜ್ವಾನ್ ಅರ್ಷದ್ ನಿವಾಸಕ್ಕೆ ಭೇಟಿ ನೀಡಿದ್ದರು. ಸಿದ್ದರಾಮಯ್ಯ ಅವರ ಜೊತೆ ರಮೇಶ್ ಕುಮಾರ್ ಹಾಗೂ ನಜೀರ್ ಅಹಮದ್ ಅವರೂ ಸಹ ಭೋಜನ ಕೂಟದಲ್ಲಿ ಭಾಗಿಯಾಗಿದ್ದರು. ಸಿದ್ದರಾಮಯ್ಯ ಮತ್ತು ಇತರೆ ಕಾಂಗ್ರೆಸ್ ನಾಯಕರ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.