ಶ್ರೀಗುರು ಮುರುಘಾರಾಜೇಂದ್ರ ಮಹಾಸ್ವಾಮಿಗಳ 37ನೇ ಗುರುವಂದನಾ ಕಾರ್ಯಕ್ರಮದಲ್ಲಿ ಪುನೀತ್ ರಾಜ್ಕುಮಾರ್ ಅವರಿಗೆ ಮರೋಣೋತ್ತರ ಸಿದ್ಧಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಜಿಡಗಾ ಗ್ರಾಮದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಘೋಷಿಸಲಾಗಿದೆ. ಅಪ್ಪು ಕುಟುಂಬಸ್ಥರ ಅನುಪಸ್ಥಿತಿಯಲ್ಲಿ ಜಿಡಗಾ ಶ್ರೀಗಳು ಸಿದ್ಧಶ್ರೀ ಪ್ರಶಸ್ತಿ ಘೋಷಣೆ ಮಾಡಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸಲು ಸಾಧ್ಯವಾಗಲಿಲ್ಲ.. ಗುರುಗಳ ಕ್ಷಮೆ ಇರಲಿ. ನೀವು ಪುನೀತ್‌ಗೆ ನೀಡಿರುವ ಪ್ರಶಸ್ತಿ ನಿಮ್ಮ ಪಾದಕ್ಕೆ ಸಮರ್ಪಿಸುತ್ತಿದ್ದೇವೆ ಎಂದು ನಟ ರಾಘವೇಂದ್ರ ರಾಜ್ಕುಮಾರ್ ಮಾತನಾಡಿದ್ದ ಸಂದೇಶವನ್ನು ಕಾರ್ಯಕ್ರಮದಲ್ಲಿ ಪ್ರಸಾರ ಮಾಡಲಾಗಿದೆ.
ಇದನ್ನೂ ಓದಿ:11 ದೇಶಗಳಿಂದ ರಿಪೋರ್ಟ್ ಬರ್ತಿದೆ… ಓಮಿಕ್ರಾನ್ ನ ತೀವ್ರತೆ ಕಡಿಮೆ ಇದೆ ಎಂದು ಹೇಳಿದ್ದಾರೆ… ಕೆ. ಸುಧಾಕರ್