ಬೆಂಗಳೂರು : ಕೆ.ಪಿ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣ ಸಂಬಂಧ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರೇಮವ್ವ, ಅಕ್ಕಮಹಾದೇವಿ, ಮಂಜುನಾಥ್, ಕಿರಣ್, ಚೆನ್ನಪ್ಪ, ಕಾಶಿನಾಥ್ ಈ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರು ಮೊನ್ನೆ ಕೆ.ಪಿ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಮಂಜುನಾಥ್ ಎಂಬಾತನನ್ನ ಕೊಲೆ ಮಾಡಿದ್ದ ಆರೋಪಿಗಳು. ಮಂಜುನಾಥ್ ನನ್ನು ಹಲವು ಬಾರಿ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದರು. ಸರೋಜ ಮತ್ತು ಮಂಜುನಾಥ್ ನಡುವೆ ಅನೈತಿಕ ಸಂಬಂಧ ಹಿನ್ನೆಲೆ ಮಂಜುನಾಥ್ ನನ್ನ ಆರೋಪಿಗಳು ಕೊಲೆ ಮಾಡಿದ್ದರು. ಸದ್ಯ ಆರೋಪಿತೆ ಸರೋಜ ತಲೆಮರೆಸಿಕೊಂಡಿದ್ದಾರೆ. ಪೊಲೀಸರು ಸರೋಜಗಾಗಿ ಹುಡುಕಾಟ ಮುಂದುವರೆಸಿದ್ದಾರೆ. ಈ ಪ್ರಕರಣ ಕೆ.ಪಿ ಅಗ್ರಹಾರ ಠಾಣೆಯಲ್ಲಿ ದಾಖಲಾಗಿದೆ.
ಇದನ್ನೂ ಓದಿ : ಮೆಜೆಸ್ಟಿಕ್ KSRTC ಬಸ್ ನಿಲ್ದಾಣದಲ್ಲಿ ಅಗ್ನಿ ಅವಘಡ…!