ಬೆಂಗಳೂರು: ಸಾಮಾಜಿಕ ಜಾಲತಾಣ ಎನ್ನುವುದು ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ನಾವು ಜಗತ್ತನ್ನು ನೋಡುವ ರೀತಿ ಮತ್ತು ನಮ್ಮ ಸ್ನೇಹಿತರು, ಪರಿಚಯಸ್ಥರು ಮತ್ತು ನಮ್ಮ ಪ್ರೀತಿಪಾತ್ರರ ಜೊತೆ ಸಂವಹನ ನಡೆಸುವ ರೀತಿ ತುಂಬಾನೆ ಬದಲಾಗಿದೆ. ಈ ಸಾಮಾಜಿಕ ಜಾಲತಾಣಗಳು ನಮ್ಮನ್ನು ಅಷ್ಟೊಂದು ಬದಲಾಯಿಸಿದೆ ಎಂದರೆ ತಪ್ಪಾಗಲಾರದು. ಪ್ರತಿವರ್ಷ ಜೂನ್ 30 ರಂದು ವಿಶ್ವ ಸಾಮಾಜಿಕ ಮಾಧ್ಯಮ ದಿನವನ್ನಾಗಿ ಆಚರಿಸಲಾಗುತ್ತದೆ. ಈ ದಿನ ಸಾಮಾಜಿಕ ಮಾಧ್ಯಮಗಳ ಬಳಕೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ.
ಸಾಮಾಜಿಕ ಮಾಧ್ಯಮ ದಿನದ ಇತಿಹಾಸ:
ಜಾಗತಿಕ ಸಂವಹನ ಮತ್ತು ಪ್ರಾಮುಖ್ಯತೆಯನ್ನು ಸಾರುವ ದೃಷ್ಟಿಯಿಂದ ಮೊದಲ ಬಾರಿಗೆ 2010 ಜೂನ್ 30ರಂದು ಮಾಷಬಲ್ ವಿಶ್ವ ಸಾಮಾಜಿಕ ಜಾಲತಾಣ ದಿನವನ್ನು ಆಚರಿಸಿದರು. ಮೊದಲ ಸಾಮಾಜಿಕ ವೇದಿಕೆಯಾದ ಸಿಕ್ಸ್ಡಿಗ್ರೀಸ್ಅನ್ನು 1997ರಲ್ಲಿ ಆಂಡ್ರ್ಯೂ ವೈನ್ರಿಚ್ ಪ್ರಾರಂಭಿಸಿದರು. ಇದರಲ್ಲಿ ಮೊದಲಿಗೆ ವೆಬ್ಸೈಟ್ ಬಳಕೆದಾರರಿಗೆ ತಮ್ಮ ಸ್ನೇಹಿತರು, ಕುಟುಂಬದ ಸದಸ್ಯರನ್ನು ಸೇರಿಸಲು ಅವಕಾಶ ಮಾಡಿಕೊಡಲಾಯಿತು. ತದನಂತರ ಶಾಲಾ ಅಂಗಸಂಸ್ಥೆಗಳು, ಪ್ರೊಫೈಲ್ಗಳಂತಹ ವಿವಿಧ ಆಸಕ್ತಿದಾಯಕ ವೈಶಿಷ್ಟ್ಯಗಳನ್ನು ಜತೆಗೆ ಒಂದು ದಶಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ಹೊಂದಿತ್ತು. 2001ರಲ್ಲಿ ಈ ವೇದಿಕೆ ಮುಚ್ಚಲ್ಪಟ್ಟಿತು.
ಆರಂಭದಲ್ಲಿ ಫೇಸ್ಬುಕ್ಅನ್ನು ಜನರು ಸಂವಹನ ನಡೆಸಲು ಬಳಸುತ್ತಿದ್ದರು. ಆದರೆ ಈಗ ಸಮಯ ಬದಲಾಗಿದೆ ಅಭಿವೃದ್ಧಿ ಹೊಂದುತ್ತಿರುವ ಯುಗದಲ್ಲಿ ಟ್ವಿಟರ್, ಇನ್ಸ್ಟಾಗ್ರಾಂ, ಲಿಂಕ್ಡ್ಇನ್, ಸ್ನ್ಯಾಪ್‌ಚಾಟ್ ನಂತಹ ಅನೇಕ ಪ್ಲಾಟ್‌ಫಾರ್ಮ್‌ಗಳು ಮಾಹಿತಿಯ ಮೂಲಗಳಾಗಿ ವ್ಯಾಪಕವಾಗಿ ಬಳಸಲಾಗುತ್ತದೆ.
ಸಾಮಾಜಿಕ ಮಾಧ್ಯಮ ದಿನದ ಮಹತ್ವ:
ಸಾಮಾಜಿಕ ಮಾಧ್ಯಮ ವೇದಿಕೆಗಳ ಪ್ರಾಮುಖ್ಯತೆ ಮತ್ತು ಅವು ನಮ್ಮ ದೈನಂದಿನ ಜೀವನದ ಮೇಲೆ ಹೇಗೆ ಪ್ರಭಾವ ಬೀರಿವೆ ಎಂಬುದನ್ನು ಎತ್ತಿ ಹಿಡಿಯಲು ಸಾಮಾಜಿಕ ಮಾಧ್ಯಮ ದಿನವನ್ನು ಜಗತ್ತಿನಾದ್ಯಂತ ಆಚರಿಸಲಾಗುತ್ತದೆ.