ದುಬೈ: ಟೀಂ ಇಂಡಿಯಾ ಮತ್ತು ಶ್ರೀಲಂಕಾ ನಡುವಿನ ಪಂದ್ಯದಲ್ಲಿ ಶ್ರೀಲಂಕಾ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಏಷ್ಯಾ ಕಪ್ ನ ಸೂಪರ್ ಫೋರ್ ಹಂತದ ತನ್ನ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ, ಪಾಕಿಸ್ತಾನದ ವಿರುದ್ಧ ಸೋಲನುಭವಿಸಿದೆ. ಈ ಹಿನ್ನೆಲೆಯಲ್ಲಿ ಫೈನಲ್ ಪ್ರವೇಶಿಸಲು ಇಂದು ಶ್ರೀಲಂಕಾ ವಿರುದ್ಧ ನಡೆಯಲಿರುವ ಮತ್ತು ಅಫ್ಘಾನಿಸ್ತಾನ ವಿರುದ್ಧದ ಪಂದ್ಯಗಳನ್ನು ಭಾರಿ ಅಂತರದಿಂದ ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ. ಈ ಟೂರ್ನಿಯಲ್ಲಿ ಟೀಂ ಇಂಡಿಯಾ ಬೌಲಿಂಗ್ ವಿಭಾಗದಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಬೌಲಿಂಗ್ ವಿಭಾಗದ ಸಮಸ್ಯೆ ಸರಿಪಡಿಸಿಕೊಂಡು ಉತ್ತಮ ಪ್ರದರ್ಶನ ತೋರಬೇಕಿದೆ. ರವಿ ಬಿಶ್ನೋಯಿ ಬದಲು ರವಿಚಂದ್ರನ್ ಅಶ್ವಿನಿ 11 ರ ಬಳಗದಲ್ಲಿ ಸ್ಥಾನ ಪಡೆದಿದ್ಧಾರೆ.
Sri Lanka have won the toss and elect to bowl first.
Live – https://t.co/JFtIjXSBXC #INDvSL #AsiaCup2022 pic.twitter.com/M5ELveGnls
— BCCI (@BCCI) September 6, 2022
ಇನ್ನು ಶ್ರೀಲಂಕಾ ತಂಡ ಲೀಗ್ ಹಂತದಲ್ಲಿ ಬಾಂಗ್ಲಾದೇಶದ ವಿರುದ್ಧ ರೋಚಕ ಜಯ ದಾಖಲಿಸುವ ಮೂಲಕ ಸೂಪರ್ ಫೋರ್ ಹಂತ ಪ್ರವೇಶಿಸಿತ್ತು. ಸೂಪರ್ ಫೋರ್ ಹಂತದ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡ ಅಫ್ಘಾನಿಸ್ತಾನವನ್ನು ಸೋಲಿಸಿದೆ. ಈ ಹಿನ್ನೆಲೆಯಲ್ಲಿ ಶ್ರೀಲಂಕಾ ತಂಡದ ಆಟಗಾರರ ಆತ್ಮವಿಶ್ವಾಸ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಇಂದು ಶ್ರೀಲಂಕಾ ತಂಡ ಟೀಂ ಇಂಡಿಯಾಗೆ ಪೈಪೋಟಿ ನೀಡುವ ನಿರೀಕ್ಷೆ ಇದೆ.
ತಂಡಗಳು:
ಟೀಂ ಇಂಡಿಯಾ: ಕೆಎಲ್ ರಾಹುಲ್, ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿ.ಕೀ.), ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಯಜುವೇಂದ್ರ ಚಾಹಲ್, ಅರ್ಷದೀಪ್ ಸಿಂಗ್
ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್(ವಿ.ಕೀ.), ಚರಿತ್ ಅಸಲಂಕ, ದನುಷ್ಕ ಗುಣತಿಲಕ, ಭಾನುಕ ರಾಜಪಕ್ಸೆ, ದಸುನ್ ಶನಕ (ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ಮಹೀಶ್ ತೀಕ್ಷಣ, ಅಸಿತ ಫೆರ್ನಾಂಡೊ, ದಿಲ್ಶನ್ ಮಧುಶಂಕ
One change in the #TeamIndia Playing XI.
R Ashwin comes in for Ravi Bishnoi.
Live – https://t.co/JFtIjXSBXC #INDvSL #AsiaCup2022 pic.twitter.com/yxZoLWYHTe
— BCCI (@BCCI) September 6, 2022