ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಪರೀಕ್ಷೆ ನಡೆಯಲಿದೆ.
ಮಾರ್ಚ್ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಏಪ್ರಿಲ್ 1ರಂದು ಅರ್ಥ ಶಾಸ್ತ್ರ, ಕೋರ್ ಸಬ್ಜೆಕ್ಟ್, ಏಪ್ರಿಲ್ 4ರಂದು ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6ರಂದು ಸಮಾಜ ವಿಜ್ಞಾನ, ಏ.8ರಂದು ತೃತೀಯ ಭಾಷೆ, ಏ.11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ ಹಿಂದೂಸ್ತಾನಿ ಸಂಗೀತ ಪರೀಕ್ಷೆ ನಡೆಯಲಿದೆ.
ಈಗಾಗಲೇ ಪ್ರೌಢ ಸಿಕ್ಷಣ ಪರೀಕ್ಷಾ ಮಂಡಳಿ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಟಿಸಿತ್ತು. ಈಗ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ ನವರು ಬಿಜೆಪಿಗೆ ಹೋಗಲ್ಲ… ರಮೇಶ್ ಜಾರಕಿಹೊಳಿ ಮಾತಿಗೆ ಕಿಮ್ಮತ್ತು ಕೊಡುವ ಅಗತ್ಯ ಇಲ್ಲ: ಸಿದ್ದರಾಮಯ್ಯ…