ಬೆಂಗಳೂರು : ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಇಂದು ಗುಡುಗು, ಸಿಡಿಲು ಧಾರಾಕಾರ ಮಳೆ ಸಾಧ್ಯತೆಗಳಿವೆ. ಕರ್ನಾಟಕದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಡೇಂಜರ್ ಆಗಿದ್ದು, ಹಾಸನ ಜಿಲ್ಲೆಯಲ್ಲಿ 1ರಿಂದ 10ನೇ ತರಗತಿ ಸ್ಕೂಲ್ಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಮೇ 21ರವರೆಗೆ ರಜೆ ಘೋಷಣೆ ಮಾಡಿದ್ದಾರೆ. ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ ‘ಆರೆಂಜ್ ಅಲರ್ಟ್’ ಮತ್ತು ತುಮಕೂರು, ಕೋಲಾರ, ದಾವಣಗೆರೆ, ಚಿತ್ರದುರ್ಗ,ಬಳ್ಳಾರಿ, ಬೆಂಗಳೂರು, ಬಳ್ಳಾರಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ವಿಜಯಪುರ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಲಾಗಿದೆ. ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರದಿಂದಿರಬೇಕು. ಮೇ 21ರ ಬಳಿಕ ರಾಜ್ಯದಾದ್ಯಂತ ಮಳೆ ತಗ್ಗುವ ಸಾಧ್ಯತೆಗಳಿವೆ.
ಇದನ್ನೂ ಓದಿ : SSLC ಪರೀಕ್ಷೆ ಫಲಿತಾಂಶಕ್ಕೆ ಕೌಂಟ್ಡೌನ್..! ಇಂದು ಮಧ್ಯಾಹ್ನ 12.30ಕ್ಕೆ ರಿಸಲ್ಟ್ ಅನೌನ್ಸ್..!