ಕನ್ನಡ ಬಿಗ್ಬಾಸ್ 03 ರ ಸ್ಪರ್ಧಿ ಜಯಶ್ರೀ ರಾಮಯ್ಯ ಮಾಗಡಿ ರಸ್ತೆಯ ಪ್ರಗತಿ ಲೇಔಟ್ನಲ್ಲಿರುವ ಸಂಧ್ಯಾ ಕಿರಣ ವೃದ್ಧಾಶ್ರಮದಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಹಿಂದೆಯೂ ಮೂರು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದು ಇದೀಗ ವೃದ್ಧಾಶ್ರಮದಲ್ಲಿ ನೇಣು ಬಿಗಿದು ಸಾವನ್ನಪ್ಪಿದ್ದಾರೆ.
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ನಟಿ ಜಯಶ್ರೀ ಈ ಹಿಂದೆಯೂ ಹಲವು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ.
ಉಪ್ಪು ಉಳಿ ಖಾರ, ಕನ್ನಡ್ ಗೊತ್ತಿಲ್ಲ ಎಂಬ ಕನ್ನಡದ ಎರಡು ಸಿನೆಮಾಗಳಲ್ಲಿ ನಟಿಸಿದ್ದರು.
ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿದ್ದಾರೆ.