ಬಾಲಿವುಡ್ನ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಹಿಂದೆ ಕಾಣದ ಕೈಗಳ ಕೈವಾಡವಿದೆ. ಸುಶಾಂತ್ ಸಾವಿಗೆ ನ್ಯಾಯ ಸಿಗಲೇಬೇಕು. ಎಂದು ಸುಶಾಂತ್ ಸಿಂಗ್ ರಜಪೂತ್ ರವರ ತಂದೆ ಕೆ.ಕೆ ಸಿಂಗ್ರವರು ಹಾಗು ನಟಿ ಕಂಗನ ಸೇರಿದಂತೆ ಹಲವರು ಹೊರಾಟ ನಡೆಸುತ್ತಿದ್ದಾರೆ. ಇವರೆಲ್ಲರ ಹೋರಾಟಕ್ಕೆ ಪ್ರತಿಫಲದಂತೆ ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ.
ಸುಶಾಂತ್ ಸಾವಿನ ಪ್ರಕರಣದಲ್ಲಿ ದಿನದಿಂದ ದಿನಕ್ಕೊಂದು ತಿರುವು ಸಿಗುತ್ತಿರುವ ಬೆನ್ನಲ್ಲೇ, ಸುಶಾಂತ್ ಸೂಸೈಡ್ ಕೇಸ್ ಸಿಬಿಐ ತನಿಖೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಸಿಬಿಐ ತನಿಖೆ ಬಗ್ಗೆ ಬಿಹಾರ-ಮಹಾರಾಷ್ಟ್ರ ನಡುವೆ ನಡೆದಿದ್ದ ಹಗ್ಗಜಗ್ಗಾಟದಲ್ಲಿ, ಬಿಹಾರ ಸರ್ಕಾರ ದಾಖಲಿಸಿದ್ದ ಎಫ್‌ಐಆರ್ ಅನ್ನು ಕೋರ್ಟ್ ಮಾನ್ಯ ಮಾಡಿದೆ.
ಇದನ್ನೂ ಓದಿ : ಬಾಲಿವುಡ್ ನಟ ಸುಶಾಂತ್ ಸಿಂಗ್ಗೆ ಪತ್ರ ಬರೆದ ರಿಯಾ ಚಕ್ರವರ್ತಿ ! ಇಲ್ಲದ ಪ್ರಿಯಕರನಿಗೆ ಬರೆದ ಪತ್ರದಲ್ಲಿ ಏನಿದೆ ಗೊತ್ತಾ ?
ಎಲ್ಲಾ ಎಫ್ಐಆರ್ಗಳನ್ನೂ ಸಿಬಿಐಗೆ ವರ್ಗಾಯಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ, ಸುಶಾಂತ್ ಸಿಂಗ್ ಅಭಿಮಾನಿಗಳು ಮತ್ತು ಕುಟುಂಬದವರು ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂ ಓದಿ : ಆತ್ಮಹತ್ಯೆಯ ನಿರ್ಧಾರ ಮಾಡಿದ್ರಾ ರಘು ದೀಕ್ಷಿತ್..? ಸಂಗೀತಾ ಮಾಂತ್ರಿಕ ಸಾವಿನ ನಿರ್ಧಾರಕ್ಕೆ ಕಾರಣವೇನು ?
ಸುಶಾಂತ್ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಕೆಕೆ ಸಿಂಗ್ ರವರು, ನಟಿ ರಿಯಾ ಚಕ್ರವರ್ತಿ ವಿರುದ್ಧ ಬಿಹಾರದ ಪಾಟ್ನಾದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವನ್ನು ಮುಂಬೈಗೆ ವರ್ಗಾಯಿಸುವಂತೆ ನಟಿ ಸಲ್ಲಿಸಿದ್ದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ತೀರ್ಪಿಗೆ ಕಾದಿದ್ದ ರಿಯಾ ಚಕ್ರವರ್ತಿಗೆ ತೀವ್ರ ಹಿನ್ನಡೆಯಾಗಿದೆ. ಪಾಟ್ನಾದ ಪೊಲೀಸ್ ಠಾಣೆಯಲ್ಲಿ ರಿಯಾ ಚಕ್ರವರ್ತಿ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಕೂಡ ಕಾನೂನುಬದ್ಧವಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಇದನ್ನೂ ಓದಿ :
ಸುಪ್ರೀಂಕೋರ್ಟ್‌ನ ಏಕ ಸದಸ್ಯ ನ್ಯಾಯಪೀಠ ನೀಡಿರುವ ತೀರ್ಪನ್ನು ಪ್ರಶ್ನಿಸುವ ಸ್ವಾತಂತ್ರ್ಯ ನೀಡುವಂತೆ ಕೋರಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಕೂಡ ತಿರಸ್ಕರಿಸಲಾಗಿದ್ದು, ಸಿಬಿಐ ತನಿಖೆಗೆ ಸ್ವತಃ ನ್ಯಾಯಾಲಯವೇ ಆದೇಶ ನೀಡಿರುವುದರಿಂದ ಮಹಾರಾಷ್ಟ್ರ ಸರ್ಕಾರವು ಸಿಬಿಐ ತನಿಖೆಗೆ ಸಹಕಾರ ನೀಡಲೇಬೇಕಾಗಿದೆ.