ಬಾಗಲಕೋಟೆ: ಇತ್ತ ರಾಜ್ಯದಲ್ಲಿ ಭೀಕರ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಪ್ರವಾಹ ಉಂಟಾಗಿದೆ. ಆದರೆ ಹಲವು ಬಿಜೆಪಿ ನಾಯಕರು ಗೋವಾದಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ.
ಮಳೆಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡದೆ ನಾಯಕರು ಮೋಜು, ಮಸ್ತಿಯಲ್ಲಿ ತೊಡಗಿಕೊಂಡಿದ್ದಾರೆ. ಗೋವಾದಲ್ಲಿ ಬಾಗಲಕೋಟೆಯ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಹಲವು ನಾಯಕರು ಜನಸ ಸಂಕಷ್ಟ ಮರೆತು ಗೋವಾದ ರೆಸಾರ್ಟ್ ನಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ. ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಸಿದ್ದು ಸವದಿ ಈಜಾಡುತ್ತಾ ಮಸ್ತಿ ಮಾಡುತ್ತಿರುವ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.