ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ಇಂದು ಮತದಾನ ನಡೆಯಲಿದ್ದು ಎನ್ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಗೆಲುವು ಬಹುತೇಕ ಖಚಿತವಾಗಿದೆ.
ಹಾಲಿ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ಕ್ಕೆ ಕೊನೆಗೊಳ್ಳಲಿದೆ. ಈ ಬಾರಿ ಉಪರಾಷ್ಟ್ರಪತಿ ಹುದ್ದೆಗೆ NDA ಅಭ್ಯರ್ಥಿಯಾಗಿ ಜಗದೀಪ್ ಧನ್ಖರ್ ಮತ್ತು UPA ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವ ಕಣದಲ್ಲಿದ್ದಾರೆ. ರಾಷ್ಟ್ರಪತಿ ಚುನಾವಣೆಯ ನಂತರ, ಚುನಾವಣಾ ಆಯೋಗ 16ನೇ ಉಪರಾಷ್ಟ್ರಪತಿ ಆಯ್ಕೆ ನಡೆಯಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. 543 ಲೋಕಸಭೆ ಸದಸ್ಯರು, 243 ರಾಜ್ಯಸಭೆ ಸದಸ್ಯರು ಸೇರಿ 780 ಜನಪ್ರತಿನಿಧಿಗಳು ಮತದಾನ ಮಾಡಲಿದ್ದಾರೆ. ಶಾಸಕರು ಉಪರಾಷ್ಟ್ರಪತಿ ಆಯ್ಕೆಯಲ್ಲಿ ಪಾಲ್ಗೊಳ್ಳುವುದಿಲ್ಲ.