ಮೈಸೂರು :ಬ್ರಾಹ್ಮಣರನ್ನು ಅವಹೇಳನ ಮಾಡಿದ್ದಾರೆಂದು ಸಿದ್ದರಾಮಯ್ಯ ಆಪ್ತ ಪ.ರಮೇಶ್ ವಿರುದ್ಧ ದೂರು ದಾಖಲಾಗಿದೆ. ಬ್ರಾಹ್ಮಣ ಸಮುದಾಯದ ಮುಖಂಡರು ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮೂಡಾ ಮಾಜಿ ಅಧ್ಯಕ್ಷ ಹಾಗೂ ಬ್ರಾಹ್ಮಣ ಸಮುದಾಯದ ಮುಖಂಡ ರಾಜೀವ್, ಆದ್ಯಾತ್ಮ ಚಿಂತಕ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ನೂರಾರು ಮಂದಿ ಪೊಲೀಸ್ ಠಾಣೆಗೆ ಆಗಮಿಸಿದ್ದರು. ವೇದಿಕೆ ಸಿಕ್ಕ ತಕ್ಷಣ ಬಾಯಿಗೆ ಬಂದಂತೆ ಮಾತಡ್ತಿರುವ ಪ.ಮಲ್ಲೇಶ್ ಮೇಲೆ ಕ್ರಮ ಜರುಗಿಸಬೇಕು. ಇಲ್ಲದೇ ಇದ್ದರೆ ನವೆಂಬರ್ 21ರ ನಂತರ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಮುಖಂಡರು ಆಕ್ರೋಶ ಹೊರ ಹಾಕಿದ್ರು. ಶನಿವಾರ ಮೈಸೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಗೂ ನಿರ್ಧಾರ ಮಾಡಲಾಗಿದೆ. ಬ್ರಾಹ್ಮಣರನ್ನು ಯಾರೂ ನಂಬಬೇಡಿ. ವೇದ, ಉಪನಿಷತ್ತು ವ್ಯವಸ್ಥೆಯನ್ನು ಹಾಳು ಮಾಡಿವೆ ಎಂದು ಸಮಾಜವಾದಿ ಪ.ಮಲ್ಲೇಶ್ ಹೇಳಿಕೆ ನೀಡಿದ್ದರು.
ಇದನ್ನೂ ಓದಿ : ಪ್ರೊಡ್ಯೂಸರ್ ಮನೆ ಮುಂದೆ ಮಿಡ್ನೈಟ್ ಹೈಡ್ರಾಮಾ… ಮಧ್ಯರಾತ್ರಿ ಮೂರು ಗಂಟೆ ವೇಳೆ ನಗ್ನಳಾಗಿ ಕುಳಿತ ನಟಿ…