ಮೈಸೂರು: ಅಧಿಕಾರಿಗಳು ಸರ್ಕಾರದ ಗಮನಕ್ಕೆ ತರದಂತೆ ಕೆಲಸ ಮಾಡಿದ್ದಾರೆ. ನಂಜನಗೂಡು ಉಚ್ಚಗಣಿ ದೇವಾಲಯ ನೆಲಸಮ ಮಾಡಿದ್ದು ತಪ್ಪು ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ನಂಜನಗೂಡು ಉಚ್ಚಗಣಿ ದೇವಾಲಯ ನೆಲಸಮ ಮಾಡಿದ ಕುರಿತು ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ ನೀಡಿದ್ದಾರೆ. ಅಧಿಕಾರಿಗಳು ಸರ್ಕಾರದ ಗಮನಕ್ಕೆ ತರದಂತೆ ಕೆಲಸ ಮಾಡಿದ್ದಾರೆ. ಅಧಿಕಾರಿಗಳ ತಲೆದಂಡದ ಬಗ್ಗೆ ಸಿಎಂ ಹಾಗೂ ಕಂದಾಯ ಸಚಿವರು ಯೋಚನೆ ಮಾಡ್ತಿದ್ದಾರೆ. ಈ ವಿಚಾರದ ಬಗ್ಗೆ ಅಧಿವೇಶನದಲ್ಲಿಯೂ ಚರ್ಚೆ ಆಗಿದೆ. ಇದರ ಬಗ್ಗೆ ಸರ್ಕಾರ ಮಸೂದೆ ಜಾರಿಗೆ ತರುತ್ತಿದೆ. ಇದು ಜನರ ಭಾವನಾತ್ಮಕ ವಿಚಾರವಾಗಿದೆ ಅಂತ ಹೇಳಿದ್ದಾರೆ. ಇನ್ನು ಜನರ ಭಾವನೆಗಳಿಗೂ ಬೆಲೆ ಕೊಡಬೇಕಾಗಿದೆ. ನ್ಯಾಯಾಲಯ ಆದೇಶವನ್ನ ಪಾಲನೆ ಮಾಡಿಕೊಂಡು ಮಸೂದೆ ಜಾರಿಗೆ ತರಲಾಗುವುದು ಎಂದು ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ಇದನ್ನೂ ಓದಿ:ಒಡಿಶಾ, ಆಂಧ್ರ ಕರಾವಳಿಗೆ ಅಪ್ಪಳಿಸಲಿರುವ ಗುಲಾಬ್ ಚಂಡಮಾರುತ… ರಾಜ್ಯದಲ್ಲಿ ಮೂರು ದಿನ ಭಾರಿ ಮಳೆ…