ಅಬುಧಾಬಿ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ (73) ಅವರು ಶುಕ್ರವಾರ ನಿಧನರಾಗಿದ್ದಾರೆ.
ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್-ನಹ್ಯಾನ್ ಅವರು ಶುಕ್ರವಾರ ಮೃತಪಟ್ಟಿದ್ಧಾರೆ. ಶೇಖ್ ಖಲೀಫಾ ಬಿನ್ ಜಾಯೆದ್ ಅಲ್-ನಹ್ಯಾನ್ ಅವರು ಯುಎಇನ ಎರಡನೇ ಅಧ್ಯಕ್ಷರಾಗಿ 2004 ರ ನವೆಂಬರ್ ನಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಆದರೆ 2014 ರಲ್ಲಿ ಅವರಿಗೆ ಪಾರ್ಶ್ವವಾಯು ಆದ ಬಳಿಕ, ಶಸ್ತಚಿಕಿತ್ಸೆಗೆ ಒಳಗಾಗಿದ್ದರು. ಆ ಬಳಿಕ ಅವರು ಸಾರ್ವಜನಿಕವಾಗಿ ಹೆಚ್ಚಾಗಿ ಕಾಣಿಸಿಕೊಂಡಿರಲಿಲ್ಲ.
ಇದನ್ನೂ ಓದಿ: ಮಂಡ್ಯದ ಮುಸ್ಕಾನ್ ವಿದೇಶ ಪ್ರವಾಸ : ಮುಸ್ಕಾನ್, ಕುಟುಂಬ ಸದಸ್ಯರನ್ನು ವಿಚಾರಣೆಗೆ ಒಳಪಡಿಸಬೇಕೆಂದು ಗೃಹ ಸಚಿವರಿಗೆ ದೂರು…
ಶೇಖ್ ಖಲೀಫಾ ಬಿನ್ ಜಾಯೆದ್ ಅಲ್-ನಹ್ಯಾನ್ ಅವರ ಸಹೋದರ ಅಬುಧಾಬಿಯ ರಾಜಕುಮಾರ ಮೊಹಮ್ಮದ್ ಬಿನ್ ಝಾಯೆದ್ ಅವರು ಯುಎಇ ಆಡಳಿತವನ್ನು ನೋಡಿಕೊಳ್ಳುತ್ತಿದ್ದರು. ಯುಎಇಯ ದುಬೈ ಎಮಿರೇಟ್‌ನಲ್ಲಿರುವ ವಿಶ್ವದ ಅತಿ ಎತ್ತರದ ಕಟ್ಟಡಕ್ಕೆ ಶೇಖ್ ಖಲೀಫಾ ಅವರ ಗೌರವಾರ್ಥ ಬುರ್ಜ್ ಖಲೀಫಾ (Burj Kaleefa) ಎಂದು ಹೆಸರಿಸಲಾಗಿದೆ.