ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ವಾಣಿಜ್ಯ ಉದ್ದೇಶಕ್ಕೆ ಪರವಾನಿಗೆ ಕೊಡುವ ವಿಚಾರಕ್ಕೆ ಲಂಚ ಪಡೆಯುತ್ತಿದ್ದರು ಅನ್ನುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ACB ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಆದಿ ಉಡುಪಿಯಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ACB ಎಸ್ ಪಿ ಸೈಮನ್, ಡಿವೈಎಸ್ ಪಿ ಮಂಜುನಾಥ ಕವರಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಳಿಯ ವೇಳೆ 2.5 ಲಕ್ಷ ರೂ. ಲಂಚ ಪಡೆಯುತ್ತಿದ್ದ ನಗರಾಭಿವೃದ್ಧಿ ಪ್ರಾಧಿಕಾರ ಎಂಜಿನಿಯರ್ ಗುರುಪ್ರಸಾದ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಗುರುಪ್ರಸಾದ್ ಮತ್ತು ಪ್ರಾಧಿಕಾರದ ಅಧಿಕಾರಿಗಳಾದ ನಯಿಮಾ ಸಯೀದ್, ಪ್ರಸಾದ್ ಎಂಬುವವರನ್ನೂ ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ : ಪುನೀತ್ ಫೋಟೋ ಹಿಡಿದು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದ ವಿಜಯಪುರದ ಬಾಲಕ…