ನವದೆಹಲಿ: ಅಗ್ನಿಪಥ್ ಯೋಜನೆ ಕುರಿತು ಸುಳ್ಳು ಸುದ್ದಿ ಹರಡಿದ್ದ 35 ವಾಟ್ಸಾಪ್ ಗ್ರೂಪ್ ಗಳನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಅಗ್ನಿಪಥ್ ಯೋಜನೆ ಕುರಿತು ದೇಶದಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಹಲವು ರಾಜ್ಯಗಳಲ್ಲಿ ಯುವಕರು ಭಾರಿ ಪ್ರತಿಭಟನೆ ನಡೆಸಿ, ರೈಲು, ವಾಹನಗಳಿಗೆ ಬೆಂಕಿ ಹಚ್ಚಿ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿಯುಂಟು ಮಾಡಿದ್ದರು. ಹಿಂಸಾತ್ಮಕ ಪ್ರತಿಭಟನೆಗೆ ಪ್ರಚೋದಿಸಿದವರ ಪತ್ತೆಗೆ ಕೇಂದ್ರ ಸರ್ಕಾರ ಮುಂದಾಗಿದೆ.
ಇದರ ಭಾಗವಾಗಿ ಯೋಜನೆ ಕುರಿತು ಸುಳ್ಳು ಸುದ್ದಿ ಹರಡಿದ್ದ 35 ವಾಟ್ಸಾಪ್ ಗ್ರೂಪ್ ಗಳನ್ನು ಬ್ಯಾನ್ ಮಾಡಲಾಗಿದೆ. ಇದೇ ವೇಳೆ ಸುಳ್ಳು ಸುದ್ದಿ ಹರಡಿದ್ದ 10 ಜನರನ್ನು ಬಂಧಿಸಲಾಗಿದೆ.