ವಿಜಯಪುರ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆ ಮುಗಿದ ಬಳಿಕ ಶುದ್ಧ ಹಸ್ತನಾಗಿ ವಾಪಸ್ ಬರುತ್ತೇನೆ ಎಂದು ಕೆ.ಎಸ್. ಈಶ್ವರಪ್ಪ ಹೇಳಿದ್ಧಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ಧಾರೆ.
ವಿಜಯಪುರದ ಲಕ್ಷ್ಮೀ ನರಸಿಂಹ ದೇಗುಲದಲ್ಲಿ ಮಾತನಾಡಿದ ಪ್ರಲ್ಹಾದ್ ಜೋಶಿ ಅವರು ಈಶ್ವರಪ್ಪ ಅವರೇ ಸ್ವತಃ ರಾಜೀನಾಮೆ ನೀಡುವ ಕುರಿತು ನಿರ್ಣಯ ತೆಗೆದುಕೊಂಡಿದ್ದಾರೆ. ತನಿಖೆ ಮುಗಿದ ಬಳಿಕ ಶುದ್ಧ ಹಸ್ತನಾಗಿ ವಾಪಸ್ ಬರುತ್ತೇನೆ ಎಂದು ಅವರು ಹೇಳಿದ್ಧಾರೆ. ಅವರ ತೀರ್ಮಾನಕ್ಎಕ ಒಲ್ಲದ ಮನಸ್ಸಿನಿಂದ ನಾವು ಒಪ್ಪಿಕೊಂಡಿದ್ದೇವೆ ಎಂದು ತಿಳಿಸಿದ್ಧಾರೆ.
ಇನ್ನು ಕಾಂಗ್ರೆಸ್ ನಾಯಕರ ಹಾವಭಾವಗಳನ್ನು ಗಮನಿಸಿದರೆ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ ಇರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಬಗ್ಗೆಯೂ ತನಿಖೆ ನಡೆಯುತ್ತದೆ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯಬೇಕು ಎಂಬುದು ನನ್ನ ಅನಿಸಿಕೆ. ಸಮಗ್ರ ತನಿಖೆ ನಡೆಯಲಿದೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದ್ಧಾರೆ.
ಇದನ್ನೂ ಓದಿ: ರಾಜೀನಾಮೆಗೂ ಮುನ್ನ ಈಶ್ವರಪ್ಪ ಟೆಂಪಲ್ ರನ್… ಶಿವಮೊಗ್ಗದ ದೇಗುಲಗಳಿಗೆ ಭೇಟಿ ನೀಡಿದ ಈಶ್ವರಪ್ಪ…
ಇನ್ನು ಈಶ್ವರಪ್ಪ ಅವರ ರಾಜೀನಾಮೆ ಬಳಿಕ 5 ಸಚಿವ ಸ್ಥಾನಗಳು ಖಾಲಿಯಾಗಲಿವೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಯಾವಾಗ ಆಗಲಿದೆ ಎಂಬುದು ಗೊತ್ತಿಲ್ಲ. ಇನ್ನು ಬೊಮ್ಮಾಯಿ ಅವರು ಅತ್ಯುತ್ತಮ ಆಡಳಿತ ನೀಡುತ್ತಿದ್ದಾರೆ. ಪೂರ್ಣಾವಧಿ ಮುಗಿಯುವವರೆಗೆ ಬೊಮ್ಮಾಯಿ ಅವರೇ ಸಿಎಂ ಆಗಿರುತ್ತಾರೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದ್ಧಾರೆ.