ಮಾಸ್ಕೋ: ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಅವರು ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಅವರು ತಾತ್ಕಾಲಿಕವಾಗಿ ಅಧಿಕಾರವನ್ನು ಹಸ್ತಾಂತರಿಸಲಿದ್ದಾರೆ ಎಂದು ಅಮೆರಿದಕ ನ್ಯೂಯಾರ್ಕ್ ಪೋಸ್ಟ್ ಪತ್ರಿಕೆ ವರದಿ ಮಾಡಿದೆ.
ಪುಟಿನ್ ಅವರಿಗೆ ಕ್ಯಾನ್ಸರ್ ಇದ್ದು, ವೈದ್ಯರು ಅವರಿಗೆ ಶಸ್ತ್ರ ಚಿಕಿತ್ಸೆಗೆ ಒಳಗಾಗುವಂತೆ ಸಲಹೆ ನೀಡಿದ್ದಾರೆ. ಶಸ್ತ್ರ ಚಿಕಿತ್ಸೆ ಮತ್ತು ಚೇತರಿಸಿಕೊಳ್ಳಲು ಸ್ವಲ್ಪ ಸಮಯ ಬೇಕಾಗುವ ಹಿನ್ನೆಲೆಯಲ್ಲಿ ಪುಟಿನ್ ಅವರು ಭದ್ರತಾ ಮಂಡಳಿಯ ಕಾರ್ಯದರ್ಶಿ ನಿಕೊಲಾಯ್ ಪಟ್ರುಶೇವ್ ಅವರಿಗೆ ಕೆಲವು ದಿನಗಳ ಅವಧಿಗೆ ಅಧಿಕಾರ ಹಸ್ತಾಂತರಿಸುವ ಸಾಧ್ಯತೆಯಿದೆ ಎಂದು ಪತ್ರಿಕೆ ವರದಿ ಮಾಡಿದೆ.
ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ..! ದೆಹಲಿಯಿಂದ ಬಂದ 4,000 ಕೆಜಿ ತೂಕದ ಖಡ್ಗ..!
ಪುಟಿನ್ ಅವರು ಇತ್ತೀಚಿನ ದಿನಗಳಲ್ಲಿ ಅನಾರೋಗ್ಯದಿಂದ ಬಳಲುತ್ತಿರುವಂತೆ ಕಂಡು ಬರುತ್ತಿದ್ದಾರೆ. ಜೊತೆಗೆ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಚಡಪಡಿಕೆಯ ವರ್ತನೆ ತೋರುತ್ತಿದ್ದಾರೆ. ಜೊತೆಗೆ ಅವರಿಗೆ ಕ್ಯಾನ್ಸರ್ ಜೊತೆಯಲ್ಲೇ ಪಾರ್ಕಿನ್ ನ್ಸನ್ ಸೇರಿದಂತೆ ಹಲವು ಗಂಭೀರ ರೋಗಗಳಿವೆ ಎಂದು ವದಂತಿಗಳೂ ಹಬ್ಬಿವೆ.
ಜೊತೆಗೆ ಕೆಲವು ದಿನಗಳ ಹಿಂದೆ ವ್ಲಾದಿಮಿರ್ ಪುಟಿನ್ ಅವರು ಸುಮಾರು ಎರಡು ಗಂಟೆಗಳ ಕಾಲ ನಿಕೊಲಾಯ್ ಪಟ್ರುಶೇವ್ ಅವರೊಂದಿಗೆ ಮಾತುಕತೆ ನಡೆಸಿದ್ದರು.