ನವದೆಹಲಿ: ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು (M Venkaiah Naidu) ಅವರನ್ನು ರಾಷ್ಟ್ರಪತಿ (President of India) ಅಭ್ಯರ್ಥಿಯಾಗಿ ಆಯ್ಕೆ ಮಾಡಲು ಬಿಜೆಪಿ ಚಿಂತಿಸುತ್ತಿದ್ದು, ವೆಂಕಯ್ಯ ನಾಯ್ಡು ಅವರೇ ಮುಂದಿನ ರಾಷ್ಟ್ರಪತಿ ಆಗಲಿದ್ದಾರೆ ಎನ್ನಲಾಗುತ್ತಿದೆ.
ಪ್ರಸ್ತುತ ರಾಷ್ಟ್ರಪತಿ ಚುನಾವಣೆಯಲ್ಲಿ ಬಹುಮತದೊಂದಿಗೆ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು NDA ಗೆ 13 ಸಾವಿರಕ್ಕೂ ಹೆಚ್ಚು ಮತಗಳ ಕೊರತೆ ಇದೆ. ಹಾಗಾಗಿ ವೆಂಕಯ್ಯ ನಾಯ್ಡು ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದರೆ, ಕಾಂಗ್ರೆಸ್ ಕೂಡಾ ಅವರನ್ನು ಬೆಂಬಲಿಸುವ ವಿಶ್ವಾಸವಿದೆ. ಇನ್ನು ಇತರೆ ಪಕ್ಷಗಳು ಸಹ ಬೆಂಬಲ ನೀಡುವ ವಿಶ್ವಾಸ ಇದೆ.
ಜೊತೆಗೆ ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಟಿಆರ್ ಎಸ್ ಮತ್ತು ವೈಎಸ್ ಆರ್ ಕಾಂಗ್ರೆಸ್ ಪಕ್ಷಗಳು ಬೆಂಬಲ ನೀಡುವ ಸಾಧ್ಯತೆ ಇದೆ. ಜೊತೆಗೆ ದಕ್ಷಿಣ ಭಾರದಲ್ಲಿ ವೆಂಕಯ್ಯ ನಾಯ್ಡು ಅವರಿಗೆ ಹೆಚ್ಚಿನ ಬೆಂಬಲ ದೊರೆಯುವ ವಿಶ್ವಾಸ ಬಿಜೆಪಿಗೆ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಚರ್ಚೆ ನಡೆಸಿದ್ದಾರೆ.
ಜೊತೆಗೆ ಇಂದು ಅಮಿತ್ ಶಾ (Amit Shah), ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಮತ್ತು ಜೆ.ಪಿ. ನಡ್ಡಾ(J P Nadda) ಅವರ ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ವೆಂಕಯ್ಯ ನಾಯ್ಡು ಅವರೇ ರಾಷ್ಟ್ರಪತಿ ಅಭ್ಯರ್ಥಿಯಾಗುವ ಸಾಧ್ಯತೆಗಳು ಹೆಚ್ಚಿವೆ ಎನ್ನಲಾಗುತ್ತಿದೆ.