ವಿಜಯಪುರ : ರಾಜ್ಯದಲ್ಲಿ ಉಂಟಾಗಿರುವ ಹಿಜಾಬ್ ವಿವಾದ ಉಡುಪಿ ಜಿಲ್ಲೆಯಿಂದ ವಿಜಯಪುರಕ್ಕೂ ತಲುಪಿದ್ದು , ಹಿಜಾಬ್ ಹಾಗೂ ಕೇಸರಿ ಶಾಲು ವಿವಾದವು ಜಿಲ್ಲೆ ಜಿಲ್ಲೆಗೂ ಕಾಲಿಟ್ಟಿದೆ. ಸರ್ಕಾರಿ ಆದೇಶದ ನಂತರವೂ ಹಿಜಾಬ್ – ಕೇಸರಿ ಫೈಟ್ ಶುರುವಾಗಿದ್ದು ,ವಿಜಯಪುರದಲ್ಲಿ ಹಿಜಾಬ್ ವಿರೋಧಿಸಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ.
ವಿಜಯಪುರದ ಇಂಡಿ ಪಟ್ಟಣದ ಶಾಂತೇಶ್ವರ ಶಿಕ್ಷಣ ಸಂಸ್ಥೆಯ ಪಿಯು ಹಾಗೂ ಪದವಿ ಕಾಲೇಜಿಗೆ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ. ವಿದ್ಯಾರ್ಥಿಗಳು ಹಿಜಾಬ್ ವಿರೋಧಿಸಿ ಕೇಸರಿ ಶಾಲು ಧರಿಸಿ ಕಾಲೇಜಿಗೆ ಎಂಟ್ರಿ ಕೊಟ್ಟಿದ್ದಾರೆ.