ವಿಜಯಪುರ : ಫೇಸ್ಬುಕ್ನಲ್ಲಿ ಅವಹೇಳನಕಾರಿ ಹೇಳಿಕೆ ಪೋಸ್ಟ್ ಮಾಡಿದ್ದ ವ್ಯಕ್ತಿಯ ಹತ್ಯೆಗೈದಿರುವ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ.
ಆರೋಪಿಗಳು ರಮೇಶ ಧಾರಸಂಗನ್ನು ನಗರದಲ್ಲಿ ಬರ್ಬರವಾಗಿ ಹತ್ಯೆಗೈದು , ಕುಮಟಗಿ ತಾಂಡಾದಲ್ಲಿ ಮೃತ ದೇಹ ಎಸೆದು ಆರೋಪಿಗಳು ಪರಾರಿಯಾಗಿದ್ದರು.ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂಡಿ ಡಿವೈಎಸ್ಪಿ ಶ್ರೀಧರ ದೊಡ್ಡಿ ನೇತೃತ್ವದಲ್ಲಿಆರೋಪಿಗಳಾದ ರಘು ಕಣಮೇಶ್ವರ, ತುಳಸಿರಾಮ ಹರಿಜನ, ಗುರುಸಿದ್ದ ಡೋಣಿ ಬಂಧಿಸಿದ್ದಾರೆ. ಹತ್ಯೆಗೆ ಬಳಸಿರುವ ಎರಡು ಬೈಕ್, ಒಂದು ಕಾರನ್ನು ಪೊಲೀಸರು ಜಪ್ತಿಗೈದಿದ್ದಾರೆ.
ಇದನ್ನೂ ಓದಿ : ಬೆಳಗಾವಿಯಲ್ಲಿ ಭುಗಿಲೆದ್ದ ಹಿಜಾಬ್ ಕಿಚ್ಚು.. ಹಿಜಾಬ್ ಪರ ಪ್ರತಿಭಟನೆಗೆ ಸಾಥ್ ನೀಡಿದ್ದ 6 ಯುವಕರು..