ವಿಜಯಪುರ: ಶೌಚಾಲಯ ನಿರ್ಮಿಸುವಂತೆ ಮಹಿಳೆಯರು ಸಿಂದಗಿ ತಾಲೂಕು ಪಂಚಾಯತಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಸಿಂದಗಿ ತಾಲೂಕಿನ ಚಾಂದಕವಟೆ ಗ್ರಾಮದ ಮಹಿಳೆಯರು ಶೌಚಾಲಯಕ್ಕಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದು, ತಾಲೂಕು ಪಂಚಾಯತಿ ಅಧಿಕಾರಿಗಳು, ಸದಸ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಯಲು ಬಹಿರ್ದೆಸೆಗೆ ಹೋಗಲು ಅಸಹ್ಯ ಆಗುತ್ತಿದೆ. ಅದಕ್ಕಾಗಿ ಚಾಂದಕವಟೆಯಲ್ಲಿ ಹೈ ಟೈಕ್ ಶೌಚಾಲಯ ನಿರ್ಮಿಸಬೇಕೆಂದು ಆಗ್ರಹಿಸಿದರು.
ಇದನ್ನೂ ಓದಿ: ಶಿವಸೇನೆಯಲ್ಲಿ ಮಹಾ ಬಂಡಾಯದ ಬಿರುಗಾಳಿ..! MVA ಸರ್ಕಾರ ಪತನ…? ಮಹಾರಾಷ್ಟ್ರದಲ್ಲಿ ಶೀಘ್ರವೇ ಬಿಜೆಪಿ ಅಧಿಕಾರಕ್ಕೆ…
ಸರ್ಕಾರದಿಂದ ಶೌಚಾಲಯಕ್ಕೆ ಮೀಸಲಿಟ್ಟ ಸರ್ಕಾರಿ ಜಾಗ ಕಬಳಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಪ್ರತಿಭಟನಾಕಾರರು ತಾಲೂಕು ಪಂಚಾಯತಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಇನ್ನು ಸ್ಥಳಕ್ಕೆ ತಾಲೂಕು ಪಂಚಾಯತಿ ಸಿಎಸ್ ಸ್ಥಳಕ್ಕೆ ಬರುವಂತೆ ಪ್ರತಿಭಟನಾಕಾರರು ಪಟ್ಟುಹಿಡಿದರು.