ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಈ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಸಾರಿಗೆ ನೌಕರರ 9 ಬೇಡಿಕೆಗಳ ಪೈಕಿ 8 ಬೇಡಿಕೆ ಈಡೇರಿಸಿದ್ದೇವೆ, ಇಷ್ಟಾದರೂ ಮುಷ್ಕರ ಮಾಡೋರಿಗೆ ಏನೆಂದು ಹೇಳುವುದು? ಕಠಿಣ ಕ್ರಮ ಕೈಗೊಳ್ಳುವುದಷ್ಟೇ ಬಾಕಿ ಇದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ನಾನೇಕೆ ಅವರನ್ನು ಮಾತುಕತೆಗೆ ಕರೆಯಲಿ? ಬೇಕಿದ್ದರೆ ಮುಷ್ಕರ ಕೈಬಿಟ್ಟು ಅವರೇ ಬರಲಿ, ಬೆಂಗಳೂರಿಗೆ ಹೋಗುತ್ತಿದ್ದೇನೆ. ಅಲ್ಲಿ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ದೈನಂದಿನ ರಾಶಿ ಭವಿಷ್ಯ 09/04/2021
ಇನ್ನು ರಾಜ್ಯದಲ್ಲಿ ನಡೆಯುವ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಏಪ್ರಿಲ್ 14 ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರಕ್ಕಾಗಿ ಬರುತ್ತೇನೆ ಎಂದರು.