ಬೆಂಗಳೂರು: ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ಗೆ ನೀರು ನುಗ್ಗಿದ್ದು, ಅಪಾರ್ಟ್ಮೆಂಟ್ ಬೇಸ್ಮೆಂಟ್ಗಳೆಲ್ಲಾ ನೀರು ತುಂಬಿ ಅವಾಂತರ ಸೃಷ್ಟಿಯಾಗಿದೆ. ರಬ್ಬರ್ ಬೋಟ್ ಬಳಸಿ ಅಪಾರ್ಟ್ಮೆಂಟ್ ನಿವಾಸಿಗಳ ರಕ್ಷಣೆ ಮಾಡಲಾಗಿದೆ.
ರಾತ್ರಿಯಿಡೀ ಸುರಿದ ಮಳೆಗೆ, ಅಪಾರ್ಟ್ಮೆಂಟ್ ಒಳಗೆ ನೀರು ತುಂಬಿದೆ. ನಿವಾಸಿಗಳು ಅಪಾರ್ಟ್ಮೆಂಟ್ ಒಳಗೆ ಸಿಲುಕಿದ್ದು, ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಯಲಹಂಕ ಕೆರೆಕೋಡಿಗೆ ಹೊಂದಿಕೊಂಡಿರುವ ಈ ಅಪಾರ್ಟ್ಮೆಂಟ್ನಲ್ಲಿ, 3000ಕ್ಕೂ ಹೆಚ್ಚು ಮಂದಿ ವಾಸವಿದ್ದಾರೆ. ಸೇಫ್ಟಿ ಜಾಕೆಟ್ ಹಾಕಿಕೊಂಡು ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ ಮಾಡಲಾಗುತ್ತಿದ್ದು, ವಿದ್ಯುತ್ ಕಡಿತಗೊಳಿಸಿ ಬೋಟ್ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಸ್ಥಳಕ್ಕೆ ಯಲಹಂಕ ತಹಶಿಲ್ದಾರ್ ನಾರಾಯಣಸ್ವಾಮಿ, ಬೆಂಗಳೂರು ಉತ್ತರ ಎ.ಸಿ.ರಂಗನಾಥ್ ಭೇಟಿ ನೀಡಿದ್ದು, ಘಟನಾ ಸ್ಥಳದಲ್ಲಿ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ.
ಇದನ್ನೂ ಓದಿ:ಹಾಲಕೆರೆ ಸಂಗನಬಸವ ಶ್ರೀಗಳ ನಿಧನ… ಸಂತಾಪ ಸೂಚಿಸಿದ ಸಿಎಂ ಬೊಮ್ಮಾಯಿ…!