ಬೆಂಗಳೂರು: ಆರು ವರ್ಷದ ಪ್ರೀತಿಗೆ ಬ್ರೇಕ್ ಬಿದ್ದಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಉಲ್ಲಾಳ ಉಪನಗರದಲ್ಲಿ ನಡೆದಿದೆ. ರೋಹಿತ್ (25) ವರ್ಷದ ಯುವಕ ಮೃತಪಟ್ಟಿದ್ದಾನೆ.
ಕೊರಿಯರ್ ಕಂಪನಿ ಒಂದರಲ್ಲಿ ಕೆಲಸ ಮಾಡ್ತಿದ್ದ ರೋಹಿತ್, ಕಳೆದ ಆರು ವರ್ಷಗಳಿಂದ ಯುವತಿಯನ್ನ ಲವ್ ಮಾಡ್ತಿದ್ದ. ಆದರೆ ಕೊನೆ ಬಾರಿ ಭೇಟಿಯಾದಾಗ ಇಬ್ಬರ ನಡುವೆ ಜಗಳವಾಗಿದ್ದು, ಈ ವೇಳೆ ಇನ್ನು ಪ್ರೀತಿ ಬೇಡ ನಾವು ಬ್ರೇಕಪ್ ಮಾಡಿಕೊಳ್ಳುವ ಎಂದು ಗಲಾಟೆ ಮಾಡಿಕೊಂಡಿದ್ದಾರೆ. ಇದರಿಂದ ಮನನೊಂದು ಮನೆಯಲ್ಲಿ ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಯಾದಗಿರಿಯಲ್ಲಿ 4699 ಕೋಟಿ ವೆಚ್ಚದ ಸ್ಕಾಡಾ ಗೇಟ್ ಉದ್ಘಾಟಿಸಿದ ಪ್ರಧಾನಿ ಮೋದಿ…